Daniel · chapter 9 · verse 27
Daniel 9:27 in Kannada
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
Avanu ondu vaarakkaagi bahala janarondige drudhavaada odambadikeyannu maadikolluvanu. Vaarada madhyadalli yajnyavannoo arpaneyannoo nillisuvanu. Asahyagalannu vaahanamaadikondu obba ghaatakanu haaribaruvanu, nishchita pralayavu avanannu mulugisuva tanaka haalu maaduvanu.
Daniel 9:27 in English
- King James Version (KJV)
- And he shall confirm the covenant with many for one week: and in the midst of the week he shall cause the sacrifice and the oblation to cease, and for the overspreading of abominations he shall make [it] desolate, even until the consummation, and that determined shall be poured upon the desolate.
- World English Bible (WEB)
- He will make a firm covenant with many for one week. In the middle of the week he will cause the sacrifice and the offering to cease. On the wing of abominations will come one who makes desolate; and even to the decreed full end, wrath will be poured out on the desolate.”
- American Standard Version (ASV)
- And he shall make a firm covenant with many for one week: and in the midst of the week he shall cause the sacrifice and the oblation to cease; and upon the wing of abominations [shall come] one that maketh desolate; and even unto the full end, and that determined, shall [wrath] be poured out upon the desolate.
- Bible in Basic English (BBE)
- And a strong order will be sent out against the great number for one week; and so for half of the week the offering and the meal offering will come to an end; and in its place will be an unclean thing causing fear; till the destruction which has been fixed is let loose on him who has made waste.
- Darby Translation (DBY)
- And he shall confirm a covenant with the many [for] one week; and in the midst of the week he shall cause the sacrifice and the oblation to cease, and because of the protection of abominations [there shall be] a desolator, even until that the consumption and what is determined shall be poured out upon the desolate.
- Webster's Bible (WBS)
- And he shall confirm the covenant with many for one week: and in the midst of the week he shall cause the sacrifice and the oblation to cease, and for the overspreading of abominations, he shall make [it] desolate, even until the consummation, and that determined shall be poured upon the desolate.
- Young's Literal Translation (YLT)
- And he hath strengthened a covenant with many — one week, and [in] the midst of the week he causeth sacrifice and present to cease, and by the wing of abominations he is making desolate, even till the consummation, and that which is determined is poured on the desolate one.'
Read in context
- 25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
- 26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- 27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
Cross references
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Daniel 12:11 ದಾನಿಯೇಲನು 12:11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Luke 21:20 ಲೂಕನು 21:20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- Daniel 11:36 ದಾನಿಯೇಲನು 11:36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- Daniel 8:13 ದಾನಿಯೇಲನು 8:13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
- Isaiah 10:22–23 ಯೆಶಾಯ 10:22–23ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು. ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
- Jeremiah 32:40–42 ಯೆರೆಮೀಯ 32:40–42ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ. ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Leviticus 26:14–46 ಯಾಜಕಕಾಂಡ 26:14–46ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
Original words (Hebrew)
- confirm · H1396גָּבַר gâbar
- covenant · H1285בְּרִית bᵉrîyth
- many · H7227רַב rab
- one · H259אֶחָד ʼechâd
- week · H7620שָׁבוּעַ shâbûwaʻ
- midst · H2677חֵצִי chêtsîy
- week · H7620שָׁבוּעַ shâbûwaʻ
- sacrifice · H2077זֶבַח zebach
- oblation · H4503מִנְחָה minchâh
- cease · H7673שָׁבַת shâbath
- overspreading · H3671כָּנָף kânâph
- abominations · H8251שִׁקּוּץ shiqqûwts
- desolate · H8074שָׁמֵם shâmêm
- consummation · H3617כָּלָה kâlâh
- determined · H2782חָרַץ chârats
- poured · H5413נָתַךְ nâthak
- desolate · H8074שָׁמֵם shâmêm