Daniel · chapter 9 · verse 6
Daniel 9:6 in Kannada
ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
Illave ninna hesarinalli namma arasarigoo pradhaana rigoo tandegaligoo deshada ellaa janarigoo maata naadida ninna sevakaraada pravaadigalige kivigoda lilla.
Daniel 9:6 in English
- King James Version (KJV)
- Neither have we hearkened unto thy servants the prophets, which spake in thy name to our kings, our princes, and our fathers, and to all the people of the land.
- World English Bible (WEB)
- We haven’t listened to your servants the prophets, who spoke in your name to our kings, our princes, and our fathers, and to all the people of the land.
- American Standard Version (ASV)
- neither have we hearkened unto thy servants the prophets, that spake in thy name to our kings, our princes, and our fathers, and to all the people of the land.
- Bible in Basic English (BBE)
- We have not given ear to your servants the prophets, who said words in your name to our kings and our rulers and our fathers and all the people of the land.
- Darby Translation (DBY)
- And we have not hearkened unto thy servants the prophets, who spoke in thy name to our kings, our princes, and our fathers, and to all the people of the land.
- Webster's Bible (WBS)
- Neither have we hearkened to thy servants the prophets, who spoke in thy name to our kings, our princes, and our fathers, and to all the people of the land.
- Young's Literal Translation (YLT)
- and we have not hearkened unto Thy servants, the prophets, who have spoken in Thy name unto our kings, our heads, and our fathers, and to all the people of the land.
Read in context
- 4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
- 5ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
- 6ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
- 7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
- 8ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
Cross references
- Daniel 9:10 ದಾನಿಯೇಲನು 9:10ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Ezra 9:7 ಎಜ್ರನು 9:7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
- Zechariah 7:8–12 ಜೆಕರ್ಯ 7:8–12ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ-- ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Zechariah 1:4–6 ಜೆಕರ್ಯ 1:4–6ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Nehemiah 9:34 ನೆಹೆಮೀಯ 9:34ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
- Luke 20:10–12 ಲೂಕನು 20:10–12ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು. ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Jeremiah 44:4–5 ಯೆರೆಮೀಯ 44:4–5ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು. ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
- Jeremiah 32:32–33 ಯೆರೆಮೀಯ 32:32–33ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- Jeremiah 6:16–17 ಯೆರೆಮೀಯ 6:16–17ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು. ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- Jeremiah 44:16 ಯೆರೆಮೀಯ 44:16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.