Deuteronomy · chapter 1 · verse 30
Deuteronomy 1:30 in Kannada
ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
Nimma munde hoguva nimma devaraada kartanu, aatane aiguptadalli nimma kannugala mundeyoo aranyadalliyoo nimage maadida ellaadara prakaara nimagoskara yuddhamaaduvanu.
Deuteronomy 1:30 in English
- King James Version (KJV)
- The LORD your God which goeth before you, he shall fight for you, according to all that he did for you in Egypt before your eyes;
- World English Bible (WEB)
- The LORD your God, who goes before you, he will fight for you, according to all that he did for you in Egypt before your eyes,
- American Standard Version (ASV)
- Jehovah your God who goeth before you, he will fight for you, according to all that he did for you in Egypt before your eyes,
- Bible in Basic English (BBE)
- The Lord your God who goes before you will be fighting for you, and will do such wonders as he did for you in Egypt before your eyes;
- Darby Translation (DBY)
- Jehovah your God who goeth before you, he will fight for you, according to all that he did for you in Egypt before your eyes;
- Webster's Bible (WBS)
- The LORD your God who goeth before you; he shall fight for you, according to all that he did for you in Egypt before your eyes;
- Young's Literal Translation (YLT)
- Jehovah your God, who is going before you — He doth fight for you, according to all that He hath done with you in Egypt before your eyes,
Read in context
- 28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- 29ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
- 30ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
- 31ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
- 32ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
Cross references
- Exodus 14:14 ವಿಮೋಚನಕಾಂಡ 14:14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- Nehemiah 4:20 ನೆಹೆಮೀಯ 4:20ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Deuteronomy 3:22 ಧರ್ಮೋಪದೇಶಕಾಂಡ 3:22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
- Joshua 10:42 ಯೆಹೋಶುವ 10:42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 1 Samuel 17:45–46 1 ಸಮುವೇಲನು 17:45–46ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- 2 Chronicles 14:11–12 2 ಪೂರ್ವಕಾಲವೃತ್ತಾಂತ 14:11–12ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು. ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 2 Chronicles 32:8 2 ಪೂರ್ವಕಾಲವೃತ್ತಾಂತ 32:8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- Deuteronomy 20:1–4 ಧರ್ಮೋಪದೇಶಕಾಂಡ 20:1–4ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ. ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ-- ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ; ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.