Deuteronomy · chapter 1 · verse 34
Deuteronomy 1:34 in Kannada
ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--
Kartanu nimma maatugala dhvaniyannu keli kopisikondu pramaanamaadi--
Deuteronomy 1:34 in English
- King James Version (KJV)
- And the LORD heard the voice of your words, and was wroth, and sware, saying,
- World English Bible (WEB)
- The LORD heard the voice of your words and was angry, and swore, saying,
- American Standard Version (ASV)
- And Jehovah heard the voice of your words, and was wroth, and sware, saying,
- Bible in Basic English (BBE)
- And the Lord, hearing your words, was angry, and said with an oath,
- Darby Translation (DBY)
- And Jehovah heard the voice of your words, and was wroth, and swore, saying,
- Webster's Bible (WBS)
- And the LORD heard the voice of your words, and was wroth, and swore, saying,
- Young's Literal Translation (YLT)
- 'And Jehovah heareth the voice of your words, and is wroth, and sweareth, saying,
Read in context
- 32ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
- 33ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
- 34ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--
- 35ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- 36ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
Cross references
- Hebrews 3:8–11 ಇಬ್ರಿಯರಿಗೆ 3:8–11ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ. ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Numbers 14:22–30 ಅರಣ್ಯಕಾಂಡ 14:22–30ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು. (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು. ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ-- ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Deuteronomy 2:14–15 ಧರ್ಮೋಪದೇಶಕಾಂಡ 2:14–15ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು. ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.
- Numbers 32:8–13 ಅರಣ್ಯಕಾಂಡ 32:8–13ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು. ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ-- ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ. ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.