Deuteronomy · chapter 1 · verse 37
Deuteronomy 1:37 in Kannada
ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
Nanna meleyoo kartanu nimma deseyinda kopagondu--neenu saha adaralli praveshisu vadilla.
Deuteronomy 1:37 in English
- King James Version (KJV)
- Also the LORD was angry with me for your sakes, saying, Thou also shalt not go in thither.
- World English Bible (WEB)
- Also the LORD was angry with me for your sakes, saying, “You also shall not go in there.
- American Standard Version (ASV)
- Also Jehovah was angry with me for your sakes, saying, Thou also shalt not go in thither:
- Bible in Basic English (BBE)
- And, in addition, the Lord was angry with me because of you, saying, You yourself will not go into it:
- Darby Translation (DBY)
- Also Jehovah was angry with me on your account, saying, Thou also shalt not go in thither.
- Webster's Bible (WBS)
- Also the LORD was angry with me for your sakes, saying, Thou also shalt not go in thither.
- Young's Literal Translation (YLT)
- 'Also with me hath Jehovah been angry for your sake, saying, Also, thou dost not go in thither;
Read in context
- 35ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- 36ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
- 37ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
- 38ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
- 39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
Cross references
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Deuteronomy 4:21 ಧರ್ಮೋಪದೇಶಕಾಂಡ 4:21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
- Deuteronomy 34:4 ಧರ್ಮೋಪದೇಶಕಾಂಡ 34:4ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
- Psalm 106:32–33 ಕೀರ್ತನೆಗಳು 106:32–33ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- Numbers 27:13–14 ಅರಣ್ಯಕಾಂಡ 27:13–14ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ. ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- Deuteronomy 3:23–26 ಧರ್ಮೋಪದೇಶಕಾಂಡ 3:23–26ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ-- ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ. ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.