Deuteronomy · chapter 1 · verse 4
Deuteronomy 1:4 in Kannada
ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
Avanu heshboninalli vaasamaadida amori yara arasanaada seehonanannoo edraiyalli vaasamaadida baashaanina arasanaada oganannoo ashtaarotanalli kondanu.
Deuteronomy 1:4 in English
- King James Version (KJV)
- After he had slain Sihon the king of the Amorites, which dwelt in Heshbon, and Og the king of Bashan, which dwelt at Astaroth in Edrei:
- World English Bible (WEB)
- after he had struck Sihon the king of the Amorites who lived in Heshbon, and Og the king of Bashan who lived in Ashtaroth, at Edrei.
- American Standard Version (ASV)
- after he had smitten Sihon the king of the Amorites, who dwelt in Heshbon, and Og the king of Bashan, who dwelt in Ashtaroth, at Edrei.
- Bible in Basic English (BBE)
- After he had overcome Sihon, king of the Amorites, ruling in Heshbon, and Og, king of Bashan, ruling in Ashtaroth, at Edrei:
- Darby Translation (DBY)
- after he had smitten Sihon the king of the Amorites, who dwelt at Heshbon, and Og the king of Bashan, who dwelt at Ashtaroth [and] at Edrei.
- Webster's Bible (WBS)
- After he had slain Sihon the king of the Amorites, who dwelt in Heshbon, and Og the king of Bashan, who dwelt at Astaroth in Edrei:
- Young's Literal Translation (YLT)
- after his smiting Sihon king of the Amorite who is dwelling in Heshbon, and Og king of Bashan who is dwelling in Ashtaroth in Edrei,
Read in context
- 2(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
- 3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
- 4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
- 5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
- 6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
Cross references
- Numbers 21:21–35 ಅರಣ್ಯಕಾಂಡ 21:21–35ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Nehemiah 9:22 ನೆಹೆಮೀಯ 9:22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- Joshua 13:10–12 ಯೆಹೋಶುವ 13:10–12ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- Joshua 12:2–6 ಯೆಹೋಶುವ 12:2–6ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ. ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- Psalm 135:11 ಕೀರ್ತನೆಗಳು 135:11ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
- Psalm 136:19–20 ಕೀರ್ತನೆಗಳು 136:19–20ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
Original words (Hebrew)
- After · H310אַחַר ʼachar
- slain · H5221נָכָה nâkâh
- Sihon · H5511סִיחוֹן Çîychôwn
- king · H4428מֶלֶךְ melek
- Amorites · H567אֱמֹרִי ʼĔmôrîy
- dwelt · H3427יָשַׁב yâshab
- Heshbon · H2809חֶשְׁבּוֹן Cheshbôwn
- Og · H5747עוֹג ʻÔwg
- king · H4428מֶלֶךְ melek
- Bashan · H1316בָּשָׁן Bâshân
- dwelt · H3427יָשַׁב yâshab
- Astaroth · H6252עַשְׁתָּרוֹת ʻAshtârôwth
- Edrei · H154אֶדְרֶעִי ʼedreʻîy