Deuteronomy · chapter 1 · verse 42
Deuteronomy 1:42 in Kannada
ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
Aadare kartanu nanage--hogabediri; yuddhamaada bediri; yaakandare naanu nimma madhyadalli iruvadilla; neevu nimma shatrugalinda hodeya lpaduviri endu avarige helu andanu.
Deuteronomy 1:42 in English
- King James Version (KJV)
- And the LORD said unto me, Say unto them, Go not up, neither fight; for I [am] not among you; lest ye be smitten before your enemies.
- World English Bible (WEB)
- The LORD said to me, “Tell them, ‘Don’t go up and don’t fight; for I am not among you, lest you be struck before your enemies.’”
- American Standard Version (ASV)
- And Jehovah said unto me, Say unto them, Go not up, neither fight; for I am not among you; lest ye be smitten before your enemies.
- Bible in Basic English (BBE)
- And the Lord said to me, Say to them, Do not go up to the attack; for I am not among you, and you will be overcome by those who are against you.
- Darby Translation (DBY)
- And Jehovah said to me, Say unto them, Go not up, neither fight; for I am not among you; lest ye be smitten before your enemies.
- Webster's Bible (WBS)
- And the LORD said to me, Say to them, Go not up, neither fight; for I [am] not among you; lest ye be smitten before your enemies.
- Young's Literal Translation (YLT)
- and Jehovah saith unto me, Say to them, Ye do not go up, nor fight, for I am not in your midst, and ye are not smitten before your enemies.
Read in context
- 40ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
- 41ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
- 42ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
- 43ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.
- 44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
Cross references
- Numbers 14:41–43 ಅರಣ್ಯಕಾಂಡ 14:41–43ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ. ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ. ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
- Joshua 7:8–13 ಯೆಹೋಶುವ 7:8–13ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು. ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು? ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ. ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- 1 Samuel 4:2 1 ಸಮುವೇಲನು 4:2ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
- Isaiah 59:1–2 ಯೆಶಾಯ 59:1–2ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ. ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Isaiah 30:17 ಯೆಶಾಯ 30:17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
- 1 Samuel 4:10 1 ಸಮುವೇಲನು 4:10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.