Deuteronomy · chapter 10 · verse 4
Deuteronomy 10:4 in Kannada
ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
Aa halagegala mele kartanu munche bareda prakaara aatanu nimage bettadalli benkiyolaginda sabheya divasadalli helida hattu aajnyegalannu baredu nanage kottanu.
Deuteronomy 10:4 in English
- King James Version (KJV)
- And he wrote on the tables, according to the first writing, the ten commandments, which the LORD spake unto you in the mount out of the midst of the fire in the day of the assembly: and the LORD gave them unto me.
- World English Bible (WEB)
- He wrote on the tablets, according to the first writing, the ten commandments, which the LORD spoke to you on the mountain out of the middle of the fire in the day of the assembly; and the LORD gave them to me.
- American Standard Version (ASV)
- And he wrote on the tables, according to the first writing, the ten commandments, which Jehovah spake unto you in the mount out of the midst of the fire in the day of the assembly: and Jehovah gave them unto me.
- Bible in Basic English (BBE)
- And he put on the stones, as in the first writing, the ten rules which the Lord gave you on the mountain out of the fire on the day of the great meeting: and the Lord gave the stones to me.
- Darby Translation (DBY)
- And he wrote on the tables, as the first writing, the ten words which Jehovah spoke unto you on the mountain, from the midst of the fire, on the day of the assembly, and Jehovah gave them unto me.
- Webster's Bible (WBS)
- And he wrote on the tables according to the first writing, the ten commandments, which the LORD spoke to you in the mount, from the midst of the fire, in the day of the assembly: and the LORD gave them to me.
- Young's Literal Translation (YLT)
- 'And He writeth on the tables, according to the first writing, the Ten Matters, which Jehovah hath spoken unto you in the mount, out of the midst of the fire, in the day of the assembly, and Jehovah giveth them unto me,
Read in context
- 2ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
- 3ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
- 4ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
- 5ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
- 6ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
Cross references
- Deuteronomy 9:10 ಧರ್ಮೋಪದೇಶಕಾಂಡ 9:10ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- Deuteronomy 4:11–15 ಧರ್ಮೋಪದೇಶಕಾಂಡ 4:11–15ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು. ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ. ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು. ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು. ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
- Deuteronomy 18:16 ಧರ್ಮೋಪದೇಶಕಾಂಡ 18:16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
- Hebrews 12:18–19 ಇಬ್ರಿಯರಿಗೆ 12:18–19ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
- Exodus 19:17–18 ವಿಮೋಚನಕಾಂಡ 19:17–18ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Exodus 20:1–17 ವಿಮೋಚನಕಾಂಡ 20:1–17ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ-- ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು. ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ. ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು. ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು. ಕೊಲೆ ಮಾಡಬಾರದು. ವ್ಯಭಿಚಾರ ಮಾಡಬಾರದು. ಕದಿಯಬಾರದು. ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು. ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- Deuteronomy 5:4–26 ಧರ್ಮೋಪದೇಶಕಾಂಡ 5:4–26ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು. (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ-- ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು, ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ. ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ. ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ. ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು. ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ. ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು. ಕೊಲ್ಲಬೇಡ ವ್ಯಭಿಚಾರ ಮಾಡಬೇಡ. ಕದಿಯಬೇಡ. ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು. ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು. (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
Original words (Hebrew)
- wrote · H3789כָּתַב kâthab
- tables · H3871לוּחַ lûwach
- first · H7223רִאשׁוֹן riʼshôwn
- writing · H4385מִכְתָּב miktâb
- ten · H6235עֶשֶׂר ʻeser
- commandments · H1697דָּבָר dâbâr
- spake · H1696דָבַר dâbar
- mount · H2022הַר har
- midst · H8432תָּוֶךְ tâvek
- fire · H784אֵשׁ ʼêsh
- day · H3117יוֹם yôwm
- assembly · H6951קָהָל qâhâl
- gave · H5414נָתַן nâthan