Deuteronomy · chapter 11 · verse 18
Deuteronomy 11:18 in Kannada
ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
Aadadarinda ee nanna vaakyagalannu nimma hrudayadalliyoo manassinalliyoo ittukolliri; avugalannu gurutaagi nimma kaigalige kattikolliri; avu nimma kannugala naduve hanekattaagirali.
Deuteronomy 11:18 in English
- King James Version (KJV)
- Therefore shall ye lay up these my words in your heart and in your soul, and bind them for a sign upon your hand, that they may be as frontlets between your eyes.
- World English Bible (WEB)
- Therefore you shall lay up these words of mine in your heart and in your soul. You shall bind them for a sign on your hand, and they shall be for frontlets between your eyes.
- American Standard Version (ASV)
- Therefore shall ye lay up these my words in your heart and in your soul; and ye shall bind them for a sign upon your hand, and they shall be for frontlets between your eyes.
- Bible in Basic English (BBE)
- So keep these words deep in your heart and in your soul, and have them fixed on your hand for a sign and marked on your brow;
- Darby Translation (DBY)
- And ye shall lay up these my words in your heart and in your soul, and bind them for a sign upon your hand, and they shall be for frontlets between your eyes.
- Webster's Bible (WBS)
- Therefore shall ye lay up these my words in your heart and in your soul, and bind them for a sign upon your hand, that they may be as frontlets between your eyes.
- Young's Literal Translation (YLT)
- 'And ye have placed these my words on your heart, and on your soul, and have bound them for a sign on your hand, and they have been for frontlets between your eyes;
Read in context
- 16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
- 17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
- 18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
- 19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- 20ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
Cross references
- Deuteronomy 6:6–9 ಧರ್ಮೋಪದೇಶಕಾಂಡ 6:6–9ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- 2 Peter 3:1–2 2 ಪೇತ್ರನು 3:1–2ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ. ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Exodus 13:9 ವಿಮೋಚನಕಾಂಡ 13:9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Proverbs 6:20–23 ಜ್ಞಾನೋಕ್ತಿಗಳು 6:20–23ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ. ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ. ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು. ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- 2 Peter 1:12 2 ಪೇತ್ರನು 1:12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
- Deuteronomy 32:46 ಧರ್ಮೋಪದೇಶಕಾಂಡ 32:46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- Exodus 13:16 ವಿಮೋಚನಕಾಂಡ 13:16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
- Proverbs 7:2–3 ಜ್ಞಾನೋಕ್ತಿಗಳು 7:2–3ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು. ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.