Deuteronomy · chapter 12 · verse 26
Deuteronomy 12:26 in Kannada
ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
Ninagiruva parishuddhavaadavugalannoo ninna pramaanagalannoo maatra kartanu aadukolluva sthalakke tegedukondu barabeku.
Deuteronomy 12:26 in English
- King James Version (KJV)
- Only thy holy things which thou hast, and thy vows, thou shalt take, and go unto the place which the LORD shall choose:
- World English Bible (WEB)
- Only your holy things which you have, and your vows, you shall take and go to the place which the LORD shall choose.
- American Standard Version (ASV)
- Only thy holy things which thou hast, and thy vows, thou shalt take, and go unto the place which Jehovah shall choose;
- Bible in Basic English (BBE)
- But the holy things which you have, and the offerings of your oaths, you are to take to the place which will be marked out by the Lord:
- Darby Translation (DBY)
- But thy hallowed things which thou hast, and what thou hast vowed, thou shalt take, and come to the place which Jehovah will choose;
- Webster's Bible (WBS)
- Only thy holy things which thou hast, and thy vows, thou shalt take, and go to the place which the LORD shall choose:
- Young's Literal Translation (YLT)
- 'Only, thy holy things which thou hast, and thy vows, thou dost take up, and hast gone in unto the place which Jehovah doth choose,
Read in context
- 24ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.
- 25ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
- 26ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
- 27ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
- 28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
Cross references
- Numbers 5:9–10 ಅರಣ್ಯಕಾಂಡ 5:9–10ಇದಲ್ಲದೆ ಇಸ್ರಾಯೇಲ್ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು. ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು.
- Numbers 18:19 ಅರಣ್ಯಕಾಂಡ 18:19ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- Deuteronomy 12:6 ಧರ್ಮೋಪದೇಶಕಾಂಡ 12:6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Deuteronomy 12:21 ಧರ್ಮೋಪದೇಶಕಾಂಡ 12:21ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
- 1 Samuel 1:21–24 1 ಸಮುವೇಲನು 1:21–24ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ; ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು. ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು. ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
- Deuteronomy 12:17–18 ಧರ್ಮೋಪದೇಶಕಾಂಡ 12:17–18ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ. ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
- Leviticus 22:18–33 ಯಾಜಕಕಾಂಡ 22:18–33ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು. ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು. ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ. ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು. ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು. ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು. ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
- Genesis 28:20 ಆದಿಕಾಂಡ 28:20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- Psalm 66:13–15 ಕೀರ್ತನೆಗಳು 66:13–15ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.