Deuteronomy · chapter 15 · verse 4
Deuteronomy 15:4 in Kannada
ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
Badatanavu ninna madhyadallirada haage; ninna devaraada kartanu ninage svaadheenapadisikollu vadakke svaastyavaagi koduva deshadalli kartanu ninnannu bahalavaagi aasheervadisuvanu.
Deuteronomy 15:4 in English
- King James Version (KJV)
- Save when there shall be no poor among you; for the LORD shall greatly bless thee in the land which the LORD thy God giveth thee [for] an inheritance to possess it:
- World English Bible (WEB)
- However there will be no poor with you (for the LORD will surely bless you in the land which the LORD your God gives you for an inheritance to possess)
- American Standard Version (ASV)
- Howbeit there shall be no poor with thee (for Jehovah will surely bless thee in the land which Jehovah thy God giveth thee for an inheritance to possess it),
- Bible in Basic English (BBE)
- But there will be no poor among you; for the Lord will certainly give you his blessing in the land which the Lord your God is giving you for your heritage;
- Darby Translation (DBY)
- save when there shall be no one in need among you; for Jehovah will greatly bless thee in the land that Jehovah thy God giveth thee for an inheritance to possess it,
- Webster's Bible (WBS)
- Save when there shall be no poor among you; for the LORD shall greatly bless thee in the land which the LORD thy God giveth thee [for] an inheritance to possess it:
- Young's Literal Translation (YLT)
- only when there is no needy one with thee, for Jehovah doth greatly bless thee in the land which Jehovah thy God is giving to thee — an inheritance to possess it.
Read in context
- 2ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
- 3ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.
- 4ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
- 5ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
- 6ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
Cross references
- Isaiah 58:10–11 ಯೆಶಾಯ 58:10–11ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Proverbs 28:27 ಜ್ಞಾನೋಕ್ತಿಗಳು 28:27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Deuteronomy 14:29 ಧರ್ಮೋಪದೇಶಕಾಂಡ 14:29ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Deuteronomy 28:1–8 ಧರ್ಮೋಪದೇಶಕಾಂಡ 28:1–8ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು. ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
- Deuteronomy 28:11 ಧರ್ಮೋಪದೇಶಕಾಂಡ 28:11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
- Proverbs 14:21 ಜ್ಞಾನೋಕ್ತಿಗಳು 14:21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.