Deuteronomy · chapter 16 · verse 1
Deuteronomy 16:1 in Kannada
ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
Aabeeb tingalannu aacharisu. Adaralli ninna devaraada kartanige paskavannu aacharisabeku; yaakandare aabeeb tingalinalli ninna devaraada kartanu ninnannu raatriyalli aigupta dolaginda horage baramaadidanu;
Deuteronomy 16:1 in English
- King James Version (KJV)
- Observe the month of Abib, and keep the passover unto the LORD thy God: for in the month of Abib the LORD thy God brought thee forth out of Egypt by night.
- World English Bible (WEB)
- Observe the month of Abib, and keep the Passover to the LORD your God; for in the month of Abib the LORD your God brought you out of Egypt by night.
- American Standard Version (ASV)
- Observe the month of Abib, and keep the passover unto Jehovah thy God; for in the month of Abib Jehovah thy God brought thee forth out of Egypt by night.
- Bible in Basic English (BBE)
- Take note of the month of Abib and keep the Passover to the Lord your God: for in the month of Abib the Lord your God took you out of Egypt by night.
- Darby Translation (DBY)
- Keep the month of Abib, and celebrate the passover to Jehovah thy God; for in the month of Abib Jehovah thy God brought thee forth out of Egypt by night.
- Webster's Bible (WBS)
- Observe the month Abib, and keep the passover to the LORD thy God: for in the month of Abib the LORD thy God brought thee forth from Egypt by night.
- Young's Literal Translation (YLT)
- 'Observe the month of Abib — and thou hast made a passover to Jehovah thy God, for in the month of Abib hath Jehovah thy God brought thee out of Egypt by night;
Read in context
- 1ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- 2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
- 3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
Cross references
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- Exodus 13:4 ವಿಮೋಚನಕಾಂಡ 13:4ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
- Numbers 28:16 ಅರಣ್ಯಕಾಂಡ 28:16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
- Exodus 12:2–20 ವಿಮೋಚನಕಾಂಡ 12:2–20ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Leviticus 23:5 ಯಾಜಕಕಾಂಡ 23:5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Numbers 9:2–5 ಅರಣ್ಯಕಾಂಡ 9:2–5ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು. ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು. ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು. ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
- Exodus 12:29–42 ವಿಮೋಚನಕಾಂಡ 12:29–42ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ. ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ. ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು. ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು. ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು. ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು. ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು. ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ. ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು. ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು. ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
Original words (Hebrew)
- Observe · H8104שָׁמַר shâmar
- month · H2320חֹדֶשׁ chôdesh
- Abib · H24אָבִיב ʼâbîyb
- keep · H6213עָשָׂה ʻâsâh
- passover · H6453פֶּסַח peçach
- God · H430אֱלֹהִים ʼĕlôhîym
- month · H2320חֹדֶשׁ chôdesh
- Abib · H24אָבִיב ʼâbîyb
- God · H430אֱלֹהִים ʼĕlôhîym
- forth · H3318יָצָא yâtsâʼ
- Egypt · H4714מִצְרַיִם Mitsrayim
- night · H3915לַיִל layil