Deuteronomy · chapter 16 · verse 10
Deuteronomy 16:10 in Kannada
ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
Aaga ninna devaraada kartanu ninnannu aasheervadisida prakaara ninna kaikoduva uchitavaada kaanikeya merege ninna devaraada kartanige vaaragala habbamaadabeku.
Deuteronomy 16:10 in English
- King James Version (KJV)
- And thou shalt keep the feast of weeks unto the LORD thy God with a tribute of a freewill offering of thine hand, which thou shalt give [unto the Lord thy God], according as the LORD thy God hath blessed thee:
- World English Bible (WEB)
- You shall keep the feast of weeks to the LORD your God with a tribute of a free will offering of your hand, which you shall give according to how the LORD your God blesses you.
- American Standard Version (ASV)
- And thou shalt keep the feast of weeks unto Jehovah thy God with a tribute of a freewill-offering of thy hand, which thou shalt give, according as Jehovah thy God blesseth thee:
- Bible in Basic English (BBE)
- Then keep the feast of weeks to the Lord your God, with an offering freely given to him from the wealth he has given you:
- Darby Translation (DBY)
- And thou shalt hold the feast of weeks to Jehovah thy God with a tribute of a voluntary-offering of thy hand, which thou shalt give, according as Jehovah thy God hath blessed thee;
- Webster's Bible (WBS)
- And thou shalt keep the feast of weeks to the LORD thy God with a tribute of a free-will-offering of thy hand, which thou shalt give [to the LORD thy God] , according as the LORD thy God hath blessed thee:
- Young's Literal Translation (YLT)
- and thou hast made the feast of weeks to Jehovah thy God, a tribute of a free-will offering of thy hand, which thou dost give, as Jehovah thy God doth bless thee.
Read in context
- 8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- 9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
- 10ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
- 11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- 12ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
Cross references
- 1 Corinthians 16:2 1 ಕೊರಿಂಥದವರಿಗೆ 16:2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 2 Corinthians 8:10 2 ಕೊರಿಂಥದವರಿಗೆ 8:10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
- 2 Corinthians 9:5–11 2 ಕೊರಿಂಥದವರಿಗೆ 9:5–11ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು. ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Malachi 3:10–11 ಮಲಾಕಿಯ 3:10–11ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 12:8 ಯಾಜಕಕಾಂಡ 12:8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- Numbers 31:37 ಅರಣ್ಯಕಾಂಡ 31:37ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- Leviticus 5:7 ಯಾಜಕಕಾಂಡ 5:7ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
- Deuteronomy 16:16–17 ಧರ್ಮೋಪದೇಶಕಾಂಡ 16:16–17ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- Haggai 2:15–19 ಹಗ್ಗಾಯ 2:15–19ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ. ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ. ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ. ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Numbers 31:28 ಅರಣ್ಯಕಾಂಡ 31:28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.