Deuteronomy · chapter 16 · verse 15
Deuteronomy 16:15 in Kannada
ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
Ninna devaraada kartanige elu divasa kartanu aadukolluva sthaladalli habba maadabeku; ninna devaraada kartanu ninnannu ellaa aadaayadalliyoo ellaa kaikelasadalliyoo aasheervadisuvadarinda neenu nijavaagiyoo santoshadinda irabeku.
Deuteronomy 16:15 in English
- King James Version (KJV)
- Seven days shalt thou keep a solemn feast unto the LORD thy God in the place which the LORD shall choose: because the LORD thy God shall bless thee in all thine increase, and in all the works of thine hands, therefore thou shalt surely rejoice.
- World English Bible (WEB)
- You shall keep a feast to the LORD your God seven days in the place which the LORD chooses, because the LORD your God will bless you in all your increase and in all the work of your hands, and you shall be altogether joyful.
- American Standard Version (ASV)
- Seven days shalt thou keep a feast unto Jehovah thy God in the place which Jehovah shall choose; because Jehovah thy God will bless thee in all thine increase, and in all the work of thy hands, and thou shalt be altogether joyful.
- Bible in Basic English (BBE)
- Keep the feast to the Lord your God for seven days, in the place marked out by the Lord: because the blessing of the Lord your God will be on all the produce of your land and all the work of your hands, and you will have nothing but joy.
- Darby Translation (DBY)
- Seven days shalt thou hold a feast to Jehovah thy God in the place which Jehovah will choose; for Jehovah thy God will bless thee in all thy produce, and in all the work of thy hands, and thou shalt be wholly joyful.
- Webster's Bible (WBS)
- Seven days shalt thou keep a solemn feast to the LORD thy God in the place which the LORD shall choose: because the LORD thy God shall bless thee in all thy increase, and in all the works of thy hands, therefore thou shalt surely rejoice.
- Young's Literal Translation (YLT)
- Seven days thou dost feast before Jehovah thy God, in the place which Jehovah doth choose, for Jehovah thy God doth bless thee in all thine increase, and in every work of thy hands, and thou hast been only rejoicing.
Read in context
- 13ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
- 14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- 15ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- 16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- 17ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
Cross references
- Deuteronomy 30:16 ಧರ್ಮೋಪದೇಶಕಾಂಡ 30:16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- Leviticus 23:36–42 ಯಾಜಕಕಾಂಡ 23:36–42ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
- Deuteronomy 16:10 ಧರ್ಮೋಪದೇಶಕಾಂಡ 16:10ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
- Deuteronomy 28:8–12 ಧರ್ಮೋಪದೇಶಕಾಂಡ 28:8–12ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Deuteronomy 7:13 ಧರ್ಮೋಪದೇಶಕಾಂಡ 7:13ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
- Numbers 29:12–38 ಅರಣ್ಯಕಾಂಡ 29:12–38ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು; ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು. ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
Original words (Hebrew)
- Seven · H7651שֶׁבַע shebaʻ
- days · H3117יוֹם yôwm
- feast · H2287חָגַג châgag
- God · H430אֱלֹהִים ʼĕlôhîym
- place · H4725מָקוֹם mâqôwm
- choose · H977בָּחַר bâchar
- God · H430אֱלֹהִים ʼĕlôhîym
- bless · H1288בָרַךְ bârak
- increase · H8393תְּבוּאָה tᵉbûwʼâh
- works · H4639מַעֲשֶׂה maʻăseh
- hands · H3027יָד yâd
- rejoice · H8056שָׂמֵחַ sâmêach