Deuteronomy · chapter 16 · verse 18
Deuteronomy 16:18 in Kannada
ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
Kartanu ninage ninna gotragala prakaara koduva ninna ellaa baagalugalalli ninage nyaayaa dhipatigalannoo adhikaarigalannoo ittukollabeku; avaru janakke neetiyinda nyaayateerisabeku.
Deuteronomy 16:18 in English
- King James Version (KJV)
- Judges and officers shalt thou make thee in all thy gates, which the LORD thy God giveth thee, throughout thy tribes: and they shall judge the people with just judgment.
- World English Bible (WEB)
- You shall make judges and officers in all your gates, which the LORD your God gives you, according to your tribes; and they shall judge the people with righteous judgment.
- American Standard Version (ASV)
- Judges and officers shalt thou make thee in all thy gates, which Jehovah thy God giveth thee, according to thy tribes; and they shall judge the people with righteous judgment.
- Bible in Basic English (BBE)
- You are to make judges and overseers in all your towns which the Lord your God gives you, for every tribe: and they are to be upright men, judging the people in righteousness.
- Darby Translation (DBY)
- Judges and officers shalt thou make thee in all thy gates, which Jehovah thy God giveth thee, throughout thy tribes, that they may judge the people with just judgment.
- Webster's Bible (WBS)
- Judges and officers shalt thou make thee in all thy gates, which the LORD thy God giveth thee, throughout thy tribes: and they shall judge the people with just judgment.
- Young's Literal Translation (YLT)
- 'Judges and authorities thou dost make to thee within all thy gates which Jehovah thy God is giving to thee, for thy tribes; and they have judged the people — a righteous judgment.
Read in context
- 16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- 17ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- 18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- 19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- 20ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
Cross references
- 1 Chronicles 23:4 1 ಪೂರ್ವಕಾಲವೃತ್ತಾಂತ 23:4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- Deuteronomy 21:2 ಧರ್ಮೋಪದೇಶಕಾಂಡ 21:2ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.
- Exodus 21:6 ವಿಮೋಚನಕಾಂಡ 21:6ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
- Deuteronomy 1:15–17 ಧರ್ಮೋಪದೇಶಕಾಂಡ 1:15–17ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Deuteronomy 17:12 ಧರ್ಮೋಪದೇಶಕಾಂಡ 17:12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
- Romans 13:1–6 ರೋಮಾಪುರದವರಿಗೆ 13:1–6ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
- Exodus 18:25–26 ವಿಮೋಚನಕಾಂಡ 18:25–26ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- 2 Chronicles 19:5–11 2 ಪೂರ್ವಕಾಲವೃತ್ತಾಂತ 19:5–11ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು. ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು. ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ-- ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು. ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು. ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- Deuteronomy 17:9 ಧರ್ಮೋಪದೇಶಕಾಂಡ 17:9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
- Deuteronomy 19:17–18 ಧರ್ಮೋಪದೇಶಕಾಂಡ 19:17–18ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
- 1 Chronicles 26:29 1 ಪೂರ್ವಕಾಲವೃತ್ತಾಂತ 26:29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
- Psalm 82:2–3 ಕೀರ್ತನೆಗಳು 82:2–3ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.