Deuteronomy · chapter 17 · verse 11
Deuteronomy 17:11 in Kannada
ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
Avaru ninage bodhisuva nyaaya pramaanada prakaaravoo avaru ninage heluva teerpina prakaaravoo neenu maadabeku; avaru ninage tilisuva vaakyavannu bittu edakkaadaroo balakkaadaroo tolagabaaradu.
Deuteronomy 17:11 in English
- King James Version (KJV)
- According to the sentence of the law which they shall teach thee, and according to the judgment which they shall tell thee, thou shalt do: thou shalt not decline from the sentence which they shall shew thee, [to] the right hand, nor [to] the left.
- World English Bible (WEB)
- According to the decisions of the law which they shall teach you, and according to the judgment which they shall tell you, you shall do. You shall not turn away from the sentence which they announce to you, to the right hand, nor to the left.
- American Standard Version (ASV)
- according to the tenor of the law which they shall teach thee, and according to the judgment which they shall tell thee, thou shalt do; thou shalt not turn aside from the sentence which they shall show thee, to the right hand, nor to the left.
- Bible in Basic English (BBE)
- Acting in agreement with their teaching and the decision they give: not turning to one side or the other from the word they have given you.
- Darby Translation (DBY)
- according to the sentence of the law which they shall declare unto thee, and according to the judgment which they shall tell thee, thou shalt do: thou shalt not decline from the word which they shall declare unto thee, to the right hand, or the left.
- Webster's Bible (WBS)
- According to the sentence of the law which they shall teach thee, and according to the judgment which they shall tell thee, thou shalt do: thou shalt not decline from the sentence which they shall show thee, [to] the right hand, nor [to] the left.
- Young's Literal Translation (YLT)
- 'According to the tenor of the law which they direct thee, and according to the judgment which they say to thee thou dost do; thou dost not turn aside from the word which they declare to thee, right or left.
Read in context
- 9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
- 10ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
- 11ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
- 12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
- 13ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
Cross references
- Joshua 1:7 ಯೆಹೋಶುವ 1:7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- 1 Peter 2:13–15 1 ಪೇತ್ರನು 2:13–15ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ. ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- Romans 13:1–6 ರೋಮಾಪುರದವರಿಗೆ 13:1–6ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
- Proverbs 4:27 ಜ್ಞಾನೋಕ್ತಿಗಳು 4:27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Joshua 23:6 ಯೆಹೋಶುವ 23:6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
- Deuteronomy 25:1 ಧರ್ಮೋಪದೇಶಕಾಂಡ 25:1ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
- Deuteronomy 28:14 ಧರ್ಮೋಪದೇಶಕಾಂಡ 28:14ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- Deuteronomy 5:32 ಧರ್ಮೋಪದೇಶಕಾಂಡ 5:32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- 2 Samuel 14:19 2 ಸಮುವೇಲನು 14:19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
- Jude 1:8 ಯೂದನು 1:8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
- Deuteronomy 17:20 ಧರ್ಮೋಪದೇಶಕಾಂಡ 17:20ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.