Deuteronomy · chapter 18 · verse 10
Deuteronomy 18:10 in Kannada
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
Tanna maganannu illave magalannu benkidaatisuvavanoo kaniheluvavanoo meghamantradavanoo sarpamantradavanoo maatagaaranoo
Deuteronomy 18:10 in English
- King James Version (KJV)
- There shall not be found among you [any one] that maketh his son or his daughter to pass through the fire, [or] that useth divination, [or] an observer of times, or an enchanter, or a witch,
- World English Bible (WEB)
- There shall not be found with you anyone who makes his son or his daughter to pass through the fire, one who uses divination, one who tells fortunes, or an enchanter, or a sorcerer,
- American Standard Version (ASV)
- There shall not be found with thee any one that maketh his son or his daughter to pass through the fire, one that useth divination, one that practiseth augury, or an enchanter, or a sorcerer,
- Bible in Basic English (BBE)
- Let there not be seen among you anyone who makes his son or his daughter go through the fire, or anyone using secret arts, or a maker of strange sounds, or a reader of signs, or any wonder-worker,
- Darby Translation (DBY)
- There shall not be found among you he that maketh his son or his daughter to pass through the fire, that useth divination, that useth auguries, or an enchanter, or a sorcerer,
- Webster's Bible (WBS)
- There shall not be found among you [any one] that maketh his son or his daughter to pass through the fire, [or] that useth divination, [or] an observer of times, or an enchanter, or a witch,
- Young's Literal Translation (YLT)
- there is not found in thee one causing his son and his daughter to pass over into fire, a user of divinations, an observer of clouds, and an enchanter, and a sorcerer,
Read in context
- 8ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
- 9ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
- 10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
- 11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
- 12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
Cross references
- Leviticus 19:31 ಯಾಜಕಕಾಂಡ 19:31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 22:18 ವಿಮೋಚನಕಾಂಡ 22:18ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
- Leviticus 19:26 ಯಾಜಕಕಾಂಡ 19:26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Acts 19:19 ಅಪೊಸ್ತಲರ ಕೃತ್ಯಗಳು 19:19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Leviticus 20:2–5 ಯಾಜಕಕಾಂಡ 20:2–5ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ. ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 2 Kings 16:3 2 ಅರಸುಗಳು 16:3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
- 1 Samuel 28:9 1 ಸಮುವೇಲನು 28:9ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
- 1 Chronicles 10:13 1 ಪೂರ್ವಕಾಲವೃತ್ತಾಂತ 10:13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- 2 Chronicles 28:3 2 ಪೂರ್ವಕಾಲವೃತ್ತಾಂತ 28:3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- Isaiah 47:13 ಯೆಶಾಯ 47:13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.