Deuteronomy · chapter 19 · verse 10
Deuteronomy 19:10 in Kannada
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
Ninna devaraada kartanu ninage svaastyavaagi koduva ninna deshadalli aparaadhavillada raktavu chellalpattaddarinda raktaapa raadhavu ninna mele baarada haage neenu ee mooru pattanagalige innoo mooru pattanagalannu koodisabeku.
Deuteronomy 19:10 in English
- King James Version (KJV)
- That innocent blood be not shed in thy land, which the LORD thy God giveth thee [for] an inheritance, and [so] blood be upon thee.
- World English Bible (WEB)
- This is so that innocent blood will not be shed in the middle of your land which the LORD your God gives you for an inheritance, leaving blood guilt on you.
- American Standard Version (ASV)
- that innocent blood be not shed in the midst of thy land, which Jehovah thy God giveth thee for an inheritance, and so blood be upon thee.
- Bible in Basic English (BBE)
- So that in all your land, which the Lord your God is giving you for your heritage, no man may be wrongly put to death, for which you will be responsible.
- Darby Translation (DBY)
- that innocent blood be not shed in the midst of thy land which Jehovah thy God giveth thee for an inheritance, and blood come not upon thee.
- Webster's Bible (WBS)
- That innocent blood may not be shed in thy land, which the LORD thy God giveth thee [for] an inheritance, and [so] blood be upon thee.
- Young's Literal Translation (YLT)
- and innocent blood is not shed in the midst of thy land which Jehovah thy God is giving to thee — an inheritance, and there hath been upon thee blood.
Read in context
- 8ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
- 9ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
- 10ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
- 11ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
- 12ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
Cross references
- Proverbs 6:17 ಜ್ಞಾನೋಕ್ತಿಗಳು 6:17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Isaiah 59:7 ಯೆಶಾಯ 59:7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- Matthew 27:4–5 ಮತ್ತಾಯನು 27:4–5ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Deuteronomy 21:1–9 ಧರ್ಮೋಪದೇಶಕಾಂಡ 21:1–9ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು. ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು. ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು. ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು. ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ. ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು. ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
- Joel 3:19 ಯೋವೇಲ 3:19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Jonah 1:14 ಯೋನ 1:14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
- Jeremiah 7:6–7 ಯೆರೆಮೀಯ 7:6–7ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
- Deuteronomy 19:13 ಧರ್ಮೋಪದೇಶಕಾಂಡ 19:13ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- 1 Kings 2:31 1 ಅರಸುಗಳು 2:31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.