Deuteronomy · chapter 19 · verse 11
Deuteronomy 19:11 in Kannada
ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
Aadare obbanu tanna nereyavanannu hagemaadi avanigaagi honchikondu avanige virodha vaagi eddu avanannu saayuva varegoo hodedu avanu sattaddarinda aa pattanagalalli ondakke odi hodare
Deuteronomy 19:11 in English
- King James Version (KJV)
- But if any man hate his neighbour, and lie in wait for him, and rise up against him, and smite him mortally that he die, and fleeth into one of these cities:
- World English Bible (WEB)
- But if any man hates his neighbor, lies in wait for him, rises up against him, strikes him mortally so that he dies, and he flees into one of these cities;
- American Standard Version (ASV)
- But if any man hate his neighbor, and lie in wait for him, and rise up against him, and smite him mortally so that he dieth, and he flee into one of these cities;
- Bible in Basic English (BBE)
- But if any man has hate for his neighbour, and waiting for him secretly makes an attack on him and gives him a blow causing his death, and then goes in flight to one of these towns;
- Darby Translation (DBY)
- But if a man hate his neighbour, and lie in wait for him, and rise up against him, and smite him mortally that he die, and he flee into one of these cities,
- Webster's Bible (WBS)
- But if any man shall hate his neighbor, and lie in wait for him, and rise up against him, and smite him mortally, that he dieth, and he shall flee into one of these cities:
- Young's Literal Translation (YLT)
- 'And when a man is hating his neighbour, and hath lain in wait for him, and risen against him, and smitten him — the life, and he hath died, and he hath fled unto one of these cities,
Read in context
- 9ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
- 10ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
- 11ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
- 12ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
- 13ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
Cross references
- Numbers 35:16–21 ಅರಣ್ಯಕಾಂಡ 35:16–21ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು. ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
- Deuteronomy 27:24 ಧರ್ಮೋಪದೇಶಕಾಂಡ 27:24ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Numbers 35:24 ಅರಣ್ಯಕಾಂಡ 35:24ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
- Exodus 21:12–14 ವಿಮೋಚನಕಾಂಡ 21:12–14ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು. ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು. ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- Proverbs 28:17 ಜ್ಞಾನೋಕ್ತಿಗಳು 28:17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.