Deuteronomy · chapter 19 · verse 8
Deuteronomy 19:8 in Kannada
ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
Idallade naanu eehottu ninage aajnyaapisuva ee aajnyeyannellaa neenu kaapaadi kaikollabeku. Ninna devaraada kartanannu preetimaadi endendigoo aatana maargadalli nadeyalaagi
Deuteronomy 19:8 in English
- King James Version (KJV)
- And if the LORD thy God enlarge thy coast, as he hath sworn unto thy fathers, and give thee all the land which he promised to give unto thy fathers;
- World English Bible (WEB)
- If the LORD your God enlarges your border, as he has sworn to your fathers, and gives you all the land which he promised to give to your fathers;
- American Standard Version (ASV)
- And if Jehovah thy God enlarge thy border, as he hath sworn unto thy fathers, and give thee all the land which he promised to give unto thy fathers;
- Bible in Basic English (BBE)
- And if the Lord your God makes wide the limits of your land, as he said in his oath to your fathers, and gives you all the land which he undertook to give to your fathers;
- Darby Translation (DBY)
- And if Jehovah thy God enlarge thy border, as he hath sworn unto thy fathers, and give thee all the land which he promised to give unto thy fathers
- Webster's Bible (WBS)
- And if the LORD thy God shall enlarge thy limits, as he hath sworn to thy fathers, and give thee all the land which he promised to give to thy fathers;
- Young's Literal Translation (YLT)
- 'And if Jehovah thy God doth enlarge thy border, as He hath sworn to thy fathers, and hath given to thee all the land which He hath spoken to give to thy fathers —
Read in context
- 6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
- 7ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
- 8ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
- 9ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
- 10ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
Cross references
- Deuteronomy 12:20 ಧರ್ಮೋಪದೇಶಕಾಂಡ 12:20ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Exodus 34:24 ವಿಮೋಚನಕಾಂಡ 34:24ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Deuteronomy 11:24–25 ಧರ್ಮೋಪದೇಶಕಾಂಡ 11:24–25ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು. ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
- Ezra 4:20 ಎಜ್ರನು 4:20ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- 1 Kings 4:21 1 ಅರಸುಗಳು 4:21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.