Deuteronomy · chapter 20 · verse 13
Deuteronomy 20:13 in Kannada
ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
Ninna devaraada kartanu adannu ninna kaige kottare adara gandasarellarannu kattiyinda hodeyabeku.
Deuteronomy 20:13 in English
- King James Version (KJV)
- And when the LORD thy God hath delivered it into thine hands, thou shalt smite every male thereof with the edge of the sword:
- World English Bible (WEB)
- When the LORD your God delivers it into your hand, you shall strike every male of it with the edge of the sword;
- American Standard Version (ASV)
- and when Jehovah thy God delivereth it into thy hand, thou shalt smite every male thereof with the edge of the sword:
- Bible in Basic English (BBE)
- And when the Lord your God has given it into your hands, let every male in it be put to death without mercy.
- Darby Translation (DBY)
- and when Jehovah thy God delivereth it into thy hand, thou shalt smite every male thereof with the edge of the sword:
- Webster's Bible (WBS)
- And when the LORD thy God hath delivered it into thy hands, thou shalt smite every male of it with the edge of the sword:
- Young's Literal Translation (YLT)
- and Jehovah thy God hath given it into thy hand, and thou hast smitten every male of it by the mouth of the sword.
Read in context
- 11ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
- 12ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.
- 13ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
- 14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
- 15ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
Cross references
- Psalm 2:6–12 ಕೀರ್ತನೆಗಳು 2:6–12ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- 1 Kings 11:15–16 1 ಅರಸುಗಳು 11:15–16ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- 2 Thessalonians 1:7–9 2 ಥೆಸಲೊನೀಕದವರಿಗೆ 1:7–9ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Numbers 31:17–18 ಅರಣ್ಯಕಾಂಡ 31:17–18ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ. ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
- Numbers 31:7–9 ಅರಣ್ಯಕಾಂಡ 31:7–9ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು. ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು. ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.