Deuteronomy · chapter 21 · verse 7
Deuteronomy 21:7 in Kannada
ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
Uttarakottu helatakkaddenandare--namma kaigalu ee raktavannu chellalilla; namma kannugalu adannu nodalilla.
Deuteronomy 21:7 in English
- King James Version (KJV)
- And they shall answer and say, Our hands have not shed this blood, neither have our eyes seen [it].
- World English Bible (WEB)
- They shall answer and say, “Our hands have not shed this blood, neither have our eyes seen it.
- American Standard Version (ASV)
- and they shall answer and say, Our hands have not shed this blood, neither have our eyes seen it.
- Bible in Basic English (BBE)
- Will say, This death is not the work of our hands and our eyes have not seen it.
- Darby Translation (DBY)
- and shall answer and say, Our hands have not shed this blood, neither have our eyes seen it.
- Webster's Bible (WBS)
- And they shall answer and say, Our hands have not shed this blood, neither have our eyes seen [it] .
- Young's Literal Translation (YLT)
- and they have answered and said, Our hands have not shed this blood, and our eyes have not seen —
Read in context
- 5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- 6ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
- 7ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
- 8ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
- 9ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
Cross references
- Job 21:21–23 ಯೋಬನು 21:21–23ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ? ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ! ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
- 2 Samuel 16:8 2 ಸಮುವೇಲನು 16:8ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- Job 21:31–34 ಯೋಬನು 21:31–34ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು? ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು. ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- Numbers 5:19–28 ಅರಣ್ಯಕಾಂಡ 5:19–28ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು. ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ. ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು. ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ, ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು. ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು. ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು. ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು. ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
- Psalm 7:3–4 ಕೀರ್ತನೆಗಳು 7:3–4ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,