Deuteronomy · chapter 22 · verse 8
Deuteronomy 22:8 in Kannada
ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
Neenu hosa maneyannu kattidaaga yaavanaa daroo adara melininda beeluva pakshadalli neenu ninna manege raktaaparaadha horisada haage ninna maaligege sannagode kattabeku.
Deuteronomy 22:8 in English
- King James Version (KJV)
- When thou buildest a new house, then thou shalt make a battlement for thy roof, that thou bring not blood upon thine house, if any man fall from thence.
- World English Bible (WEB)
- When you build a new house, then you shall make a railing around your roof, so that you don’t bring blood on your house if anyone falls from there.
- American Standard Version (ASV)
- When thou buildest a new house, then thou shalt make a battlement for thy roof, that thou bring not blood upon thy house, if any man fall from thence.
- Bible in Basic English (BBE)
- If you are building a house, make a railing for the roof, so that the blood of any man falling from it will not come on your house.
- Darby Translation (DBY)
- When thou buildest a new house, thou shalt make a parapet for thy roof, that thou bring not blood upon thy house, if any one should in any wise fall from it.
- Webster's Bible (WBS)
- When thou buildest a new house, then thou shalt make a battlement for thy roof, that thou mayest not bring blood upon thy house, if any man shall fall from thence.
- Young's Literal Translation (YLT)
- 'When thou buildest a new house, then thou hast made a parapet to thy roof, and thou dost not put blood on thy house when one falleth from it.
Read in context
- 6ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು;
- 7ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
- 8ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
- 9ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
- 10ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ.
Cross references
- Exodus 21:28–36 ವಿಮೋಚನಕಾಂಡ 21:28–36ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು. ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ. ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು. ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು. ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
- Mark 2:4 ಮಾರ್ಕನು 2:4ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- Jeremiah 19:13 ಯೆರೆಮೀಯ 19:13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
- Isaiah 22:1 ಯೆಶಾಯ 22:1ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
- Matthew 10:27 ಮತ್ತಾಯನು 10:27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
- Exodus 22:6 ವಿಮೋಚನಕಾಂಡ 22:6ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- Acts 10:9 ಅಪೊಸ್ತಲರ ಕೃತ್ಯಗಳು 10:9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- Ezekiel 3:18 ಯೆಹೆಜ್ಕೇಲನು 3:18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
- Ezekiel 3:20 ಯೆಹೆಜ್ಕೇಲನು 3:20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
- Ezekiel 32:2–9 ಯೆಹೆಜ್ಕೇಲನು 32:2–9ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು. ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು. ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು. ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ. ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.