Deuteronomy · chapter 23 · verse 11
Deuteronomy 23:11 in Kannada
ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
Sanje aaguttiruvaaga avanu neerinalli tola kollali; sooryanu munugidaaga paaleyada olage tirigi barali.
Deuteronomy 23:11 in English
- King James Version (KJV)
- But it shall be, when evening cometh on, he shall wash [himself] with water: and when the sun is down, he shall come into the camp [again].
- World English Bible (WEB)
- but it shall be, when evening comes, he shall bathe himself in water. When the sun is down, he shall come within the camp.
- American Standard Version (ASV)
- but it shall be, when evening cometh on, he shall bathe himself in water; and when the sun is down, he shall come within the camp.
- Bible in Basic English (BBE)
- But when evening comes near, let him take a bath: and after sundown he may come back to the tents.
- Darby Translation (DBY)
- and it shall be, towards evening, he shall bathe in water: and at the going down of the sun he may come inside the camp.
- Webster's Bible (WBS)
- But it shall be, when evening cometh on, he shall wash [himself] with water: and when the sun is down, he shall come into the camp [again] .
- Young's Literal Translation (YLT)
- and it hath been, at the turning of the evening, he doth bathe with water, and at the going in of the sun he doth come in unto the midst of the camp.
Read in context
- 9ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.
- 10ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
- 11ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
- 12ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.
- 13ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
Cross references
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Leviticus 14:9 ಯಾಜಕಕಾಂಡ 14:9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- Leviticus 15:5 ಯಾಜಕಕಾಂಡ 15:5ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- Luke 11:38–39 ಲೂಕನು 11:38–39ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು. ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Leviticus 15:11 ಯಾಜಕಕಾಂಡ 15:11ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Leviticus 15:17–23 ಯಾಜಕಕಾಂಡ 15:17–23ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು. ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು. ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Leviticus 22:6 ಯಾಜಕಕಾಂಡ 22:6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
- Hebrews 9:9–10 ಇಬ್ರಿಯರಿಗೆ 9:9–10ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.