Deuteronomy · chapter 23 · verse 3
Deuteronomy 23:3 in Kannada
ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
Ammonyanu illave movaabyanu kartana sabhege serabaaradu. Hattane talaantaravaadaroo avaru endigoo kartana sabheyalli serabaaradu.
Deuteronomy 23:3 in English
- King James Version (KJV)
- An Ammonite or Moabite shall not enter into the congregation of the LORD; even to their tenth generation shall they not enter into the congregation of the LORD for ever:
- World English Bible (WEB)
- An Ammonite or a Moabite shall not enter into the LORD’s assembly; even to the tenth generation shall no one belonging to them enter into the LORD’s assembly forever,
- American Standard Version (ASV)
- An Ammonite or a Moabite shall not enter into the assembly of Jehovah; even to the tenth generation shall none belonging to them enter into the assembly of Jehovah for ever:
- Bible in Basic English (BBE)
- No Ammonite or Moabite or any of their people to the tenth generation may come into the meeting of the Lord's people:
- Darby Translation (DBY)
- An Ammonite or Moabite shall not come into the congregation of Jehovah; even their tenth generation shall not come into the congregation of Jehovah for ever;
- Webster's Bible (WBS)
- An Ammonite or Moabite shall not enter into the congregation of the LORD; even to their tenth generation shall they not enter into the congregation of the LORD for ever:
- Young's Literal Translation (YLT)
- 'An Ammonite and a Moabite doth not enter into the assembly of Jehovah; even a tenth generation of them doth not enter into the assembly of Jehovah — to the age;
Read in context
- 1ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.
- 2ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.
- 3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- 4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- 5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
Cross references
- Nehemiah 13:1–2 ನೆಹೆಮೀಯ 13:1–2ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು. ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- Ruth 4:6 ರೂತಳು 4:6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
- Ruth 4:10–22 ರೂತಳು 4:10–22ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು. ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು. ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು. ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು. ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ. ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು. ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು. ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು. ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು; ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- Nehemiah 13:23 ನೆಹೆಮೀಯ 13:23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
- Isaiah 56:3 ಯೆಶಾಯ 56:3ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
- Nehemiah 4:7 ನೆಹೆಮೀಯ 4:7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
- Nehemiah 4:3 ನೆಹೆಮೀಯ 4:3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.