Deuteronomy · chapter 23 · verse 7
Deuteronomy 23:7 in Kannada
ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
Edomyanannu asahyisabeda; avanu ninna sahodaranu; aiguptyanannu asahyisabeda; avana deshadalli neenu paravaasiyaagiddi.
Deuteronomy 23:7 in English
- King James Version (KJV)
- Thou shalt not abhor an Edomite; for he [is] thy brother: thou shalt not abhor an Egyptian; because thou wast a stranger in his land.
- World English Bible (WEB)
- You shall not abhor an Edomite, for he is your brother. You shall not abhor an Egyptian, because you lived as a foreigner in his land.
- American Standard Version (ASV)
- Thou shalt not abhor an Edomite; for he is thy brother: thou shalt not abhor an Egyptian; because thou wast a sojourner in his land.
- Bible in Basic English (BBE)
- But have no hate for an Edomite, because he is your brother, or for an Egyptian, for you were living in his land.
- Darby Translation (DBY)
- Thou shalt not abhor an Edomite; for he is thy brother. Thou shalt not abhor an Egyptian; because thou wast a sojourner in his land.
- Webster's Bible (WBS)
- Thou shalt not abhor an Edomite, for he [is] thy brother: thou shalt not abhor an Egyptian, because thou wast a stranger in his land.
- Young's Literal Translation (YLT)
- 'Thou dost not abominate an Edomite, for thy brother he [is]; thou dost not abominate an Egyptian, for a sojourner thou hast been in his land;
Read in context
- 5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- 6ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
- 7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- 8ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
- 9ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.
Cross references
- Deuteronomy 10:19 ಧರ್ಮೋಪದೇಶಕಾಂಡ 10:19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- Exodus 22:21 ವಿಮೋಚನಕಾಂಡ 22:21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- Exodus 23:9 ವಿಮೋಚನಕಾಂಡ 23:9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Genesis 25:24–26 ಆದಿಕಾಂಡ 25:24–26ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು. ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು. ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
- Genesis 25:30 ಆದಿಕಾಂಡ 25:30ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
- Numbers 20:14 ಅರಣ್ಯಕಾಂಡ 20:14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
- Genesis 45:17–18 ಆದಿಕಾಂಡ 45:17–18ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
- Acts 7:10–18 ಅಪೊಸ್ತಲರ ಕೃತ್ಯಗಳು 7:10–18ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು. ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ. ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು. ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು. ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು. ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು. ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Genesis 47:12 ಆದಿಕಾಂಡ 47:12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
- Malachi 1:2 ಮಲಾಕಿಯ 1:2ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.