Deuteronomy · chapter 24 · verse 14
Deuteronomy 24:14 in Kannada
ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
Ninna sahodararalliyaagali ninna deshadalli ninna baagalugalalli iruva pararalliyaagali korateyulla badakooliyavanannu baadhisabaaradu.
Deuteronomy 24:14 in English
- King James Version (KJV)
- Thou shalt not oppress an hired servant [that is] poor and needy, [whether he be] of thy brethren, or of thy strangers that [are] in thy land within thy gates:
- World English Bible (WEB)
- You shall not oppress a hired servant who is poor and needy, whether he is one of your brothers or one of the foreigners who are in your land within your gates.
- American Standard Version (ASV)
- Thou shalt not oppress a hired servant that is poor and needy, whether he be of thy brethren, or of thy sojourners that are in thy land within thy gates:
- Bible in Basic English (BBE)
- Do not be hard on a servant who is poor and in need, if he is one of your countrymen or a man from another nation living with you in your land.
- Darby Translation (DBY)
- Thou shalt not oppress a hired servant [who is] poor and needy of thy brethren, or of thy sojourners who are in thy land within thy gates:
- Webster's Bible (WBS)
- Thou shalt not oppress a hired servant [that is] poor and needy, [whether he is] of thy brethren, or of thy strangers that [are] in thy land within thy gates:
- Young's Literal Translation (YLT)
- 'Thou dost not oppress a hireling, poor and needy, of thy brethren or of thy sojourner who is in thy land within thy gates;
Read in context
- 12ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.
- 13ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
- 14ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
- 15ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- 16ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
Cross references
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Proverbs 22:16 ಜ್ಞಾನೋಕ್ತಿಗಳು 22:16ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
- Job 24:10–11 ಯೋಬನು 24:10–11ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
- Amos 4:1 ಆಮೋಸ 4:1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- Luke 10:7 ಲೂಕನು 10:7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- Job 31:13–15 ಯೋಬನು 31:13–15ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ, ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು? ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
- Amos 2:7 ಆಮೋಸ 2:7ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
- Deuteronomy 15:12–18 ಧರ್ಮೋಪದೇಶಕಾಂಡ 15:12–18ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು. ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ. ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು. ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ. ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು. ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- Leviticus 25:35–43 ಯಾಜಕಕಾಂಡ 25:35–43ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು. ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು. ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ. ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ. ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು. ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ. ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು. ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು. ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
- Amos 8:4 ಆಮೋಸ 8:4ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.