Deuteronomy · chapter 24 · verse 17
Deuteronomy 24:17 in Kannada
ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
Paranigoo dikkilladavanigoo nyaayavannu tappisa beda; vidhaveya vastravannu otteyaagi takkollabeda.
Deuteronomy 24:17 in English
- King James Version (KJV)
- Thou shalt not pervert the judgment of the stranger, [nor] of the fatherless; nor take a widow’s raiment to pledge:
- World English Bible (WEB)
- You shall not deprive the foreigner or the fatherless of justice, nor take a widow’s clothing in pledge;
- American Standard Version (ASV)
- Thou shalt not wrest the justice [due] to the sojourner, [or] to the fatherless, nor take the widow’s raiment to pledge;
- Bible in Basic English (BBE)
- Be upright in judging the cause of the man from a strange country and of him who has no father; do not take a widow's clothing on account of a debt:
- Darby Translation (DBY)
- Thou shalt not pervert the judgment of the stranger, [or] of the fatherless; and thou shalt not take in pledge a widow's garment.
- Webster's Bible (WBS)
- Thou shalt not pervert the judgment of the stranger, [nor] of the fatherless, nor take a widow's raiment for a pledge:
- Young's Literal Translation (YLT)
- 'Thou dost not turn aside the judgment of a fatherless sojourner, nor take in pledge the garment of a widow;
Read in context
- 15ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- 16ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
- 17ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
- 18ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 19ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
Cross references
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Deuteronomy 27:19 ಧರ್ಮೋಪದೇಶಕಾಂಡ 27:19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Exodus 22:21–22 ವಿಮೋಚನಕಾಂಡ 22:21–22ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ. ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
- Exodus 23:6 ವಿಮೋಚನಕಾಂಡ 23:6ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Job 29:11–17 ಯೋಬನು 29:11–17ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Exodus 23:9 ವಿಮೋಚನಕಾಂಡ 23:9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Proverbs 22:22–23 ಜ್ಞಾನೋಕ್ತಿಗಳು 22:22–23ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ. ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.