Deuteronomy · chapter 24 · verse 8
Deuteronomy 24:8 in Kannada
ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
Kushthada baadheyalli leviyaraada yaajakaru nimage bodhisuvadannellaa neenu jaagrateyinda kaapaadi kaikolluva haage nodiko; naanu avarige aajnye kottahaage neevu kaapaadi kaikolla beku;
Deuteronomy 24:8 in English
- King James Version (KJV)
- Take heed in the plague of leprosy, that thou observe diligently, and do according to all that the priests the Levites shall teach you: as I commanded them, [so] ye shall observe to do.
- World English Bible (WEB)
- Be careful in the plague of leprosy, that you observe diligently and do according to all that the Levitical priests teach you. As I commanded them, so you shall observe to do.
- American Standard Version (ASV)
- Take heed in the plague of leprosy, that thou observe diligently, and do according to all that the priests the Levites shall teach you: as I commanded them, so ye shall observe to do.
- Bible in Basic English (BBE)
- In connection with the leper's disease, take care to keep and do every detail of the teaching of the priests, the Levites: as I gave them orders, so you are to do.
- Darby Translation (DBY)
- Take heed in the plague of leprosy, that thou take great heed, and do according to all that the priests the Levites shall teach you: as I commanded them shall ye take heed to do.
- Webster's Bible (WBS)
- Take heed in the plague of leprosy, that thou observe diligently, and do according to all that the priests the Levites shall teach you: as I commanded them, [so] ye shall observe to do.
- Young's Literal Translation (YLT)
- 'Take heed, in the plague of leprosy, to watch greatly, and to do according to all that the priests, the Levites, teach you; as I have commanded them ye observe to do;
Read in context
- 6ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
- 7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
- 8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
- 9ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
- 10ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
Cross references
- Leviticus 14:2 ಯಾಜಕಕಾಂಡ 14:2ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
- Luke 17:14 ಲೂಕನು 17:14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- Leviticus 13:1–46 ಯಾಜಕಕಾಂಡ 13:1–46ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು. ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು. ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು. ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು. ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು. ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು. ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು. ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು. ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು. ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು. ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ. ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು. ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ. ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು. ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು. ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು. ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ. ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ. ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು. ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ. ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು. ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ. ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು. ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು. ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ. ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು. ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು. ತನ್ನ ಮುಂದಲೆಯ ಕೂದಲು ಉದುರಿಹೋಗಿದ್ದರೂ ಅವನು ಪಟ್ಟೆತಲೆಯವನಾ ದರೂ ಶುದ್ಧನೇ. ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ. ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು. ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು. ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Mark 1:44 ಮಾರ್ಕನು 1:44ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Luke 5:14 ಲೂಕನು 5:14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Leviticus 14:9–10 ಯಾಜಕಕಾಂಡ 14:9–10ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- Leviticus 13:57 ಯಾಜಕಕಾಂಡ 13:57ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
Original words (Hebrew)
- heed · H8104שָׁמַר shâmar
- plague · H5061נֶגַע negaʻ
- leprosy · H6883צָרַעַת tsâraʻath
- observe · H8104שָׁמַר shâmar
- diligently · H3966מְאֹד mᵉʼôd
- do · H6213עָשָׂה ʻâsâh
- priests · H3548כֹּהֵן kôhên
- Levites · H3881לֵוִיִּי Lêvîyîy
- teach · H3384יָרָה yârâh
- commanded · H6680צָוָה tsâvâh
- observe · H8104שָׁמַר shâmar
- do · H6213עָשָׂה ʻâsâh