Deuteronomy · chapter 25 · verse 1
Deuteronomy 25:1 in Kannada
ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
Janaralli enaadaroo virodhaviddare avaru nyaayateervike honduva haage nyaayaadhipatigala balige nyaayakke bandare neetivantanannu neetivantanendoo dushtanannu aparaadhiyendoo nyaayateerisabeku.
Deuteronomy 25:1 in English
- King James Version (KJV)
- If there be a controversy between men, and they come unto judgment, that [the judges] may judge them; then they shall justify the righteous, and condemn the wicked.
- World English Bible (WEB)
- If there is a controversy between men, and they come to judgment and the judges judge them, then they shall justify the righteous and condemn the wicked.
- American Standard Version (ASV)
- If there be a controversy between men, and they come unto judgment, and [the judges] judge them; then they shall justify the righteous, and condemn the wicked.
- Bible in Basic English (BBE)
- If there is an argument between men and they go to law with one another, let the judges give their decision for the upright, and against the wrongdoer.
- Darby Translation (DBY)
- If there be a controversy between men, and they resort to judgment, and they judge [their case]; then they shall justify the righteous, and condemn the wicked.
- Webster's Bible (WBS)
- If there shall be a controversy between men, and they come to judgment, that [the judges] may judge them; then they shall justify the righteous, and condemn the wicked.
- Young's Literal Translation (YLT)
- 'When there is a strife between men, and they have come nigh unto the judgment, and they have judged, and declared righteous the righteous, and declared wrong the wrong-doer,
Read in context
- 1ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
- 2ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
- 3ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.
Cross references
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- Deuteronomy 17:8–9 ಧರ್ಮೋಪದೇಶಕಾಂಡ 17:8–9ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
- Deuteronomy 1:16–17 ಧರ್ಮೋಪದೇಶಕಾಂಡ 1:16–17ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Deuteronomy 19:17–19 ಧರ್ಮೋಪದೇಶಕಾಂಡ 19:17–19ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
- Psalm 82:2–4 ಕೀರ್ತನೆಗಳು 82:2–4ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Psalm 58:1–2 ಕೀರ್ತನೆಗಳು 58:1–2ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Exodus 23:6–7 ವಿಮೋಚನಕಾಂಡ 23:6–7ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ. ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
- Job 29:7–17 ಯೋಬನು 29:7–17ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.