Deuteronomy · chapter 26 · verse 8
Deuteronomy 26:8 in Kannada
ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
Aadadarinda kartanu nammannu tanna balavaada kaiyindaloo chaachida tolinindaloo mahaa bhayadindaloo gurutugalindaloo adbhuta galindaloo aiguptadinda horage baramaadi
Deuteronomy 26:8 in English
- King James Version (KJV)
- And the LORD brought us forth out of Egypt with a mighty hand, and with an outstretched arm, and with great terribleness, and with signs, and with wonders:
- World English Bible (WEB)
- The LORD brought us out of Egypt with a mighty hand, with an outstretched arm, with great terror, with signs, and with wonders;
- American Standard Version (ASV)
- and Jehovah brought us forth out of Egypt with a mighty hand, and with an outstretched arm, and with great terribleness, and with signs, and with wonders;
- Bible in Basic English (BBE)
- And the Lord took us out of Egypt with a strong hand and a stretched-out arm, with works of power and signs and wonders:
- Darby Translation (DBY)
- and Jehovah brought us forth out of Egypt with a powerful hand, and with a stretched-out arm, and with great terribleness, and with signs, and with wonders;
- Webster's Bible (WBS)
- And the LORD brought us out of Egypt with a mighty hand, and with an out-stretched arm, and with great terribleness, and with signs, and with wonders;
- Young's Literal Translation (YLT)
- and Jehovah bringeth us out from Egypt, by a strong hand, and by a stretched-out arm, and by great fear, and by signs, and by wonders,
Read in context
- 6ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
- 7ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
- 8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
- 9ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
- 10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
Cross references
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Exodus 12:37 ವಿಮೋಚನಕಾಂಡ 12:37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- Psalm 105:27–38 ಕೀರ್ತನೆಗಳು 105:27–38ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
- Deuteronomy 5:15 ಧರ್ಮೋಪದೇಶಕಾಂಡ 5:15ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- Psalm 78:12–13 ಕೀರ್ತನೆಗಳು 78:12–13ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- Exodus 14:16–31 ವಿಮೋಚನಕಾಂಡ 14:16–31ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು. ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು. ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು. ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ. ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು. ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು. ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು. ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು. ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು. ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Psalm 106:7–10 ಕೀರ್ತನೆಗಳು 106:7–10ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು. ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು. ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು. ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
- Exodus 12:51 ವಿಮೋಚನಕಾಂಡ 12:51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- Exodus 12:41 ವಿಮೋಚನಕಾಂಡ 12:41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- Isaiah 63:12 ಯೆಶಾಯ 63:12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?