Deuteronomy · chapter 27 · verse 16
Deuteronomy 27:16 in Kannada
ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Tanna tande taayigalannu taatsaaramaaduva vanige shaapa. Janavellaa aamen endu helali.
Deuteronomy 27:16 in English
- King James Version (KJV)
- Cursed [be] he that setteth light by his father or his mother. And all the people shall say, Amen.
- World English Bible (WEB)
- ‘Cursed is he who dishonors his father or his mother.’ All the people shall say, ‘Amen.’
- American Standard Version (ASV)
- Cursed be he that setteth light by his father or his mother. And all the people shall say, Amen.
- Bible in Basic English (BBE)
- Cursed is he who does not give honour to his father or mother. And let all the people say, So be it.
- Darby Translation (DBY)
- Cursed be he that slighteth his father or his mother! And all the people shall say, Amen.
- Webster's Bible (WBS)
- Cursed [be] he that setteth light by his father or his mother: and all the people shall say, Amen.
- Young's Literal Translation (YLT)
- 'Cursed [is] He who is making light of his father and his mother, — and all the people have said, Amen.
Read in context
- 14ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
- 15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
- 16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Cross references
- Leviticus 19:3 ಯಾಜಕಕಾಂಡ 19:3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 21:17 ವಿಮೋಚನಕಾಂಡ 21:17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
- Deuteronomy 21:18–21 ಧರ್ಮೋಪದೇಶಕಾಂಡ 21:18–21ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Matthew 15:4–6 ಮತ್ತಾಯನು 15:4–6ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Leviticus 20:9 ಯಾಜಕಕಾಂಡ 20:9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
- Proverbs 30:11–17 ಜ್ಞಾನೋಕ್ತಿಗಳು 30:11–17ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ. ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ. ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ. ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ. ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ. ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ. ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.