Deuteronomy · chapter 27 · verse 7
Deuteronomy 27:7 in Kannada
ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
Samaadhaanada baligalannu arpisi alli tindu ninna devaraada kartana munde santoshapadabeku.
Deuteronomy 27:7 in English
- King James Version (KJV)
- And thou shalt offer peace offerings, and shalt eat there, and rejoice before the LORD thy God.
- World English Bible (WEB)
- You shall sacrifice peace offerings, and shall eat there. You shall rejoice before the LORD your God.
- American Standard Version (ASV)
- and thou shalt sacrifice peace-offerings, and shalt eat there; and thou shalt rejoice before Jehovah thy God.
- Bible in Basic English (BBE)
- And you are to make your peace-offerings, feasting there with joy before the Lord your God.
- Darby Translation (DBY)
- And thou shalt sacrifice peace-offerings, and shalt eat there, and rejoice before Jehovah thy God.
- Webster's Bible (WBS)
- And thou shalt offer peace-offerings, and shalt eat there, and rejoice before the LORD thy God.
- Young's Literal Translation (YLT)
- and sacrificed peace-offerings, and eaten there, and rejoiced before Jehovah thy God,
Read in context
- 5ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
- 6ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
- 7ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
- 8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
- 9ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
Cross references
- Deuteronomy 12:7 ಧರ್ಮೋಪದೇಶಕಾಂಡ 12:7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Isaiah 12:3 ಯೆಶಾಯ 12:3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Psalm 100:1–2 ಕೀರ್ತನೆಗಳು 100:1–2ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ, ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
- Leviticus 3:1–17 ಯಾಜಕಕಾಂಡ 3:1–17ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ. ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು. ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು. ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು. ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ. ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು. ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು. ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- Hebrews 13:20–21 ಇಬ್ರಿಯರಿಗೆ 13:20–21ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Habakkuk 3:18 ಹಬಕ್ಕೂಕ 3:18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Leviticus 7:11–17 ಯಾಜಕಕಾಂಡ 7:11–17ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
- Deuteronomy 16:14 ಧರ್ಮೋಪದೇಶಕಾಂಡ 16:14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- Deuteronomy 12:12 ಧರ್ಮೋಪದೇಶಕಾಂಡ 12:12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Deuteronomy 16:11 ಧರ್ಮೋಪದೇಶಕಾಂಡ 16:11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- Deuteronomy 26:10–11 ಧರ್ಮೋಪದೇಶಕಾಂಡ 26:10–11ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು. ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.