Deuteronomy · chapter 28 · verse 1
Deuteronomy 28:1 in Kannada
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
Idallade neenu ninna devaraada kartana maatannu echcharikeyinda keli naanu ee hottu ninage aajnyaapisuva aatana ellaa aajnyegalannu kaapaadi kaikondare ninna devaraada kartanu ninnannu bhoomiya ellaa janaangagaliginta unnatadallirisuvanu.
Deuteronomy 28:1 in English
- King James Version (KJV)
- And it shall come to pass, if thou shalt hearken diligently unto the voice of the LORD thy God, to observe [and] to do all his commandments which I command thee this day, that the LORD thy God will set thee on high above all nations of the earth:
- World English Bible (WEB)
- It shall happen, if you shall listen diligently to the LORD your God’s voice, to observe to do all his commandments which I command you today, that the LORD your God will set you high above all the nations of the earth.
- American Standard Version (ASV)
- And it shall come to pass, if thou shalt hearken diligently unto the voice of Jehovah thy God, to observe to do all his commandments which I command thee this day, that Jehovah thy God will set thee on high above all the nations of the earth:
- Bible in Basic English (BBE)
- Now if you give ear to the voice of the Lord your God, and keep with care all these orders which I have given you today, then the Lord your God will put you high over all the nations of the earth:
- Darby Translation (DBY)
- And it shall come to pass, if thou shalt hearken diligently unto the voice of Jehovah thy God, to take heed to do all his commandments which I command thee this day, that Jehovah thy God will set thee supreme above all nations of the earth;
- Webster's Bible (WBS)
- And it shall come to pass, if thou shalt hearken diligently to the voice of the LORD thy God, to observe [and] to do all his commandments which I command thee this day; that the LORD thy God will set thee on high above all nations of the earth:
- Young's Literal Translation (YLT)
- 'And it hath been, if thou dost hearken diligently to the voice of Jehovah thy God, to observe to do all His commands which I am commanding thee to-day, that Jehovah thy God hath made thee uppermost above all the nations of the earth,
Read in context
- 1ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
- 2ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- 3ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
Cross references
- Isaiah 1:19 ಯೆಶಾಯ 1:19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Exodus 23:22 ವಿಮೋಚನಕಾಂಡ 23:22ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
- Leviticus 26:3–13 ಯಾಜಕಕಾಂಡ 26:3–13ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ. ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು. ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು. ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ. ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು. ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ. ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- Deuteronomy 7:12–26 ಧರ್ಮೋಪದೇಶಕಾಂಡ 7:12–26ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು. ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು. ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ. ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು. ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು. ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು. ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು. ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ. ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು. ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು. ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು. ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- Deuteronomy 15:5 ಧರ್ಮೋಪದೇಶಕಾಂಡ 15:5ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
- Deuteronomy 11:13 ಧರ್ಮೋಪದೇಶಕಾಂಡ 11:13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- James 2:10–11 ಯಾಕೋಬನು 2:10–11ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
Original words (Hebrew)
- hearken · H8085שָׁמַע shâmaʻ
- diligently · H8085שָׁמַע shâmaʻ
- voice · H6963קוֹל qôwl
- God · H430אֱלֹהִים ʼĕlôhîym
- observe · H8104שָׁמַר shâmar
- do · H6213עָשָׂה ʻâsâh
- commandments · H4687מִצְוָה mitsvâh
- command · H6680צָוָה tsâvâh
- day · H3117יוֹם yôwm
- God · H430אֱלֹהִים ʼĕlôhîym
- set · H5414נָתַן nâthan
- high · H5945עֶלְיוֹן ʻelyôwn
- nations · H1471גּוֹי gôwy
- earth · H776אֶרֶץ ʼerets