Deuteronomy · chapter 28 · verse 10
Deuteronomy 28:10 in Kannada
ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
Aaga neenu kartana hesarininda kareyalpaduvadannu bhoomiya janagalellaa nodi ninage bhayapaduvaru;
Deuteronomy 28:10 in English
- King James Version (KJV)
- And all people of the earth shall see that thou art called by the name of the LORD; and they shall be afraid of thee.
- World English Bible (WEB)
- All the peoples of the earth shall see that you are called by the LORD’s name, and they will be afraid of you.
- American Standard Version (ASV)
- And all the peoples of the earth shall see that thou art called by the name of Jehovah; and they shall be afraid of thee.
- Bible in Basic English (BBE)
- And all the peoples of the earth will see that the name of the Lord is on you, and they will go in fear of you.
- Darby Translation (DBY)
- And all peoples of the earth shall see that thou art called by the name of Jehovah, and they shall be afraid of thee.
- Webster's Bible (WBS)
- And all the people of the earth shall see that thou art called by the name of the LORD; and they shall be afraid of thee.
- Young's Literal Translation (YLT)
- and all the peoples of the land have seen that the name of Jehovah is called upon thee, and they have been afraid of thee.
Read in context
- 8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
- 9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
- 10ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
- 11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
- 12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
Cross references
- 2 Chronicles 7:14 2 ಪೂರ್ವಕಾಲವೃತ್ತಾಂತ 7:14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
- Deuteronomy 11:25 ಧರ್ಮೋಪದೇಶಕಾಂಡ 11:25ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
- Numbers 6:27 ಅರಣ್ಯಕಾಂಡ 6:27ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Daniel 9:18–19 ದಾನಿಯೇಲನು 9:18–19ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Deuteronomy 4:6–8 ಧರ್ಮೋಪದೇಶಕಾಂಡ 4:6–8ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು. ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Malachi 3:12 ಮಲಾಕಿಯ 3:12ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Exodus 12:33 ವಿಮೋಚನಕಾಂಡ 12:33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- 1 Chronicles 14:17 1 ಪೂರ್ವಕಾಲವೃತ್ತಾಂತ 14:17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
- 1 Samuel 18:28–29 1 ಸಮುವೇಲನು 18:28–29ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು; ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
- Exodus 14:25 ವಿಮೋಚನಕಾಂಡ 14:25ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.