Deuteronomy · chapter 28 · verse 15
Deuteronomy 28:15 in Kannada
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
Aadare neenu ninna devaraada kartana maatannu kelade naanu ee hottu ninage aajnyaapisuva aatana ellaa aajnyegalannu kaapaadi kaikollade hodare ee ellaa shaapagalu ninna mele bandu ninage praaptavaaguvavu.
Deuteronomy 28:15 in English
- King James Version (KJV)
- But it shall come to pass, if thou wilt not hearken unto the voice of the LORD thy God, to observe to do all his commandments and his statutes which I command thee this day; that all these curses shall come upon thee, and overtake thee:
- World English Bible (WEB)
- But it shall come to pass, if you will not listen to the LORD your God’s voice, to observe to do all his commandments and his statutes which I command you today, that all these curses will come on you and overtake you.
- American Standard Version (ASV)
- But it shall come to pass, if thou wilt not hearken unto the voice of Jehovah thy God, to observe to do all his commandments and his statutes which I command thee this day, that all these curses shall come upon thee, and overtake thee.
- Bible in Basic English (BBE)
- But if you do not give ear to the voice of the Lord your God, and take care to do all his orders and his laws which I give you today, then all these curses will come on you and overtake you:
- Darby Translation (DBY)
- But it shall come to pass if thou wilt not hearken unto the voice of Jehovah thy God, to take heed to do all his commandments and his statutes which I command thee this day, that all these curses shall come upon thee and overtake thee.
- Webster's Bible (WBS)
- But it shall come to pass, if thou wilt not hearken to the voice of the LORD thy God, to observe to do all his commandments and his statutes which I command thee this day; that all these curses shall come upon thee, and overtake thee:
- Young's Literal Translation (YLT)
- 'And it hath been, if thou dost not hearken unto the voice of Jehovah thy God to observe to do all His commands, and His statutes, which I am commanding thee to-day, that all these revilings have come upon thee, and overtaken thee:
Read in context
- 13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
- 14ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- 15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- 16ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;
- 17ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
Cross references
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Deuteronomy 28:2 ಧರ್ಮೋಪದೇಶಕಾಂಡ 28:2ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Lamentations 2:17 ಪ್ರಲಾಪಗಳು 2:17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Daniel 9:11–13 ದಾನಿಯೇಲನು 9:11–13ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
- Leviticus 26:14–46 ಯಾಜಕಕಾಂಡ 26:14–46ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Joshua 23:15 ಯೆಹೋಶುವ 23:15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Deuteronomy 27:15–26 ಧರ್ಮೋಪದೇಶಕಾಂಡ 27:15–26ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
Original words (Hebrew)
- hearken · H8085שָׁמַע shâmaʻ
- voice · H6963קוֹל qôwl
- God · H430אֱלֹהִים ʼĕlôhîym
- observe · H8104שָׁמַר shâmar
- do · H6213עָשָׂה ʻâsâh
- commandments · H4687מִצְוָה mitsvâh
- statutes · H2708חֻקָּה chuqqâh
- command · H6680צָוָה tsâvâh
- day · H3117יוֹם yôwm
- curses · H7045קְלָלָה qᵉlâlâh
- come · H935בּוֹא bôwʼ
- overtake · H5381נָשַׂג nâsag