Deuteronomy · chapter 28 · verse 43
Deuteronomy 28:43 in Kannada
ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
Ninna madhyadalliruva paravaasi mele melakke ninna mele eruvanu; aadare neenu kela kelage iliyuvi.
Deuteronomy 28:43 in English
- King James Version (KJV)
- The stranger that [is] within thee shall get up above thee very high; and thou shalt come down very low.
- World English Bible (WEB)
- The foreigner who is among you will mount up above you higher and higher, and you will come down lower and lower.
- American Standard Version (ASV)
- The sojourner that is in the midst of thee shall mount up above thee higher and higher; and thou shalt come down lower and lower.
- Bible in Basic English (BBE)
- The man from a strange land who is living among you will be lifted up higher and higher over you, while you go down lower and lower.
- Darby Translation (DBY)
- The sojourner that is in thy midst shall rise above thee higher and higher, and thou shalt sink down lower and lower.
- Webster's Bible (WBS)
- The stranger that [is] within thee shall rise above thee very high; and thou shalt come down very low.
- Young's Literal Translation (YLT)
- the sojourner who [is] in thy midst goeth up above thee very high, and thou goest down very low;
Read in context
- 41ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
- 42ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
- 43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
- 44ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
- 45ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
Cross references
- Deuteronomy 28:13 ಧರ್ಮೋಪದೇಶಕಾಂಡ 28:13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
- 1 Samuel 13:19–23 1 ಸಮುವೇಲನು 13:19–23ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು. ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು. ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- 2 Kings 24:14–16 2 ಅರಸುಗಳು 24:14–16ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Judges 10:7–10 ನ್ಯಾಯಸ್ಥಾಪಕರು 10:7–10ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು. ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು. ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು. ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
- Judges 15:11–12 ನ್ಯಾಯಸ್ಥಾಪಕರು 15:11–12ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು. ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.
- Judges 4:2–3 ನ್ಯಾಯಸ್ಥಾಪಕರು 4:2–3ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು. ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- 2 Kings 17:23 2 ಅರಸುಗಳು 17:23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Judges 2:3 ನ್ಯಾಯಸ್ಥಾಪಕರು 2:3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- 2 Kings 17:20 2 ಅರಸುಗಳು 17:20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- John 18:31 ಯೋಹಾನನು 18:31ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
- Judges 2:11–15 ನ್ಯಾಯಸ್ಥಾಪಕರು 2:11–15ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು. ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು. ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು. ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.