Deuteronomy · chapter 28 · verse 47
Deuteronomy 28:47 in Kannada
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
Neenu ellavugala samruddhiyalli ninna devaraada kartanige santoshadindaloo manassina saukhya dindaloo sevisade idaddarinda
Deuteronomy 28:47 in English
- King James Version (KJV)
- Because thou servedst not the LORD thy God with joyfulness, and with gladness of heart, for the abundance of all [things;]
- World English Bible (WEB)
- Because you didn’t serve the LORD your God with joyfulness and with gladness of heart, by reason of the abundance of all things;
- American Standard Version (ASV)
- Because thou servedst not Jehovah thy God with joyfulness, and with gladness of heart, by reason of the abundance of all things;
- Bible in Basic English (BBE)
- Because you did not give honour to the Lord your God, worshipping him gladly, with joy in your hearts on account of all your wealth of good things;
- Darby Translation (DBY)
- Because thou servedst not Jehovah thy God with joyfulness, and with gladness of heart, for the abundance of everything,
- Webster's Bible (WBS)
- Because thou didst not serve the LORD thy God with joyfulness and with gladness of heart, for the abundance of all [things] :
- Young's Literal Translation (YLT)
- 'Because that thou hast not served Jehovah thy God with joy, and with gladness of heart, because of the abundance of all things —
Read in context
- 45ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
- 46ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
- 47ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
- 48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- 49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
Cross references
- Deuteronomy 16:11 ಧರ್ಮೋಪದೇಶಕಾಂಡ 16:11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- 1 Timothy 6:17–19 1 ತಿಮೊಥೆಯನಿಗೆ 6:17–19ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು. ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- Nehemiah 9:35–37 ನೆಹೆಮೀಯ 9:35–37ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ. ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Deuteronomy 12:7–12 ಧರ್ಮೋಪದೇಶಕಾಂಡ 12:7–12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು. ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ. ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ; ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Deuteronomy 32:13–15 ಧರ್ಮೋಪದೇಶಕಾಂಡ 32:13–15ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.