Deuteronomy · chapter 28 · verse 58
Deuteronomy 28:58 in Kannada
ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
Ninna devaraada kartanemba ee ghanavulla bhayankaravaada hesarige bhayapadabekendu ee pustakadalli barediruva ee nyaayapramaanada maatugalannu kaapaadade, kaikollade hodare
Deuteronomy 28:58 in English
- King James Version (KJV)
- If thou wilt not observe to do all the words of this law that are written in this book, that thou mayest fear this glorious and fearful name, THE LORD THY GOD;
- World English Bible (WEB)
- If you will not observe to do all the words of this law that are written in this book, that you may fear this glorious and fearful name, THE LORD your God,
- American Standard Version (ASV)
- If thou wilt not observe to do all the words of this law that are written in this book, that thou mayest fear this glorious and fearful name, JEHOVAH THY GOD;
- Bible in Basic English (BBE)
- If you will not take care to do all the words of this law, recorded in this book, honouring that name of glory and of fear, THE LORD YOUR GOD;
- Darby Translation (DBY)
- If thou wilt not take heed to do all the words of this law that are written in this book, to fear this glorious and fearful name, JEHOVAH THY GOD;
- Webster's Bible (WBS)
- If thou wilt not observe to do all the words of this law that are written in this book, that thou mayest fear this glorious and fearful name, THE LORD THY GOD;
- Young's Literal Translation (YLT)
- 'If thou dost not observe to do all the words of this law which are written in this book, to fear this honoured and fearful name — Jehovah thy God —
Read in context
- 56ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
- 57ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- 58ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
- 59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
- 60ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
Cross references
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- Psalm 50:7 ಕೀರ್ತನೆಗಳು 50:7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Jeremiah 7:9–10 ಯೆರೆಮೀಯ 7:9–10ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- Exodus 6:2–3 ವಿಮೋಚನಕಾಂಡ 6:2–3ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು; ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Hebrews 10:30–31 ಇಬ್ರಿಯರಿಗೆ 10:30–31ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ. ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Exodus 34:5–7 ವಿಮೋಚನಕಾಂಡ 34:5–7ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Exodus 3:14–15 ವಿಮೋಚನಕಾಂಡ 3:14–15ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.