Deuteronomy · chapter 28 · verse 59
Deuteronomy 28:59 in Kannada
ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
Kartanu ninna baadhegalannoo ninna santatiya baadhegalannoo aashcharyavaaga maaduvanu; avu doddadaada mattu sthiravaada baadhegaloo ghora vaada mattu sthiravaada rogagaloo aaguvavu.
Deuteronomy 28:59 in English
- King James Version (KJV)
- Then the LORD will make thy plagues wonderful, and the plagues of thy seed, [even] great plagues, and of long continuance, and sore sicknesses, and of long continuance.
- World English Bible (WEB)
- then the LORD will make your plagues and the plagues of your offspring fearful, even great plagues, and of long duration, and severe sicknesses, and of long duration.
- American Standard Version (ASV)
- then Jehovah will make thy plagues wonderful, and the plagues of thy seed, even great plagues, and of long continuance, and sore sicknesses, and of long continuance.
- Bible in Basic English (BBE)
- Then the Lord your God will make your punishment, and the punishment of your seed, a thing to be wondered at; great punishments and cruel diseases stretching on through long years.
- Darby Translation (DBY)
- then Jehovah will make thy plagues wonderful, and the plagues of thy seed, great and persistent plagues and evil and persistent sicknesses;
- Webster's Bible (WBS)
- Then the LORD will make thy plagues wonderful, and the plagues of thy seed, [even] great plagues, and of long continuance, and severe sicknesses, and of long continuance.
- Young's Literal Translation (YLT)
- then hath Jehovah made wonderful thy strokes, and the strokes of thy seed — great strokes, and stedfast, and evil sicknesses, and stedfast.
Read in context
- 57ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- 58ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
- 59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
- 60ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
- 61ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
Cross references
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Mark 13:19 ಮಾರ್ಕನು 13:19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
- Deuteronomy 28:46 ಧರ್ಮೋಪದೇಶಕಾಂಡ 28:46ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
- Deuteronomy 31:17–18 ಧರ್ಮೋಪದೇಶಕಾಂಡ 31:17–18ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 1 Kings 9:7–9 1 ಅರಸುಗಳು 9:7–9ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Hosea 3:4 ಹೋಶೇಯ 3:4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Lamentations 4:12 ಪ್ರಲಾಪಗಳು 4:12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
- Lamentations 1:9 ಪ್ರಲಾಪಗಳು 1:9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- 1 Kings 16:3–4 1 ಅರಸುಗಳು 16:3–4ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು. ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
- Deuteronomy 29:20–28 ಧರ್ಮೋಪದೇಶಕಾಂಡ 29:20–28ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.