Deuteronomy · chapter 29 · verse 13
Deuteronomy 29:13 in Kannada
ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
Aa odambadike yaavadandare, aatanu ninage helidanteyoo ninna pitrugalaada abrahaamanigoo isaakanigoo yaakobanigoo pramaanamaadidanteyoo eehottu ninnannu tanage janaangavaagi sthaapisi ninage devaraaga bekembade.
Deuteronomy 29:13 in English
- King James Version (KJV)
- That he may establish thee to day for a people unto himself, and [that] he may be unto thee a God, as he hath said unto thee, and as he hath sworn unto thy fathers, to Abraham, to Isaac, and to Jacob.
- World English Bible (WEB)
- that he may establish you today as his people, and that he may be your God, as he spoke to you and as he swore to your fathers, to Abraham, to Isaac, and to Jacob.
- American Standard Version (ASV)
- that he may establish thee this day unto himself for a people, and that he may be unto thee a God, as he spake unto thee, and as he sware unto thy fathers, to Abraham, to Isaac, and to Jacob.
- Bible in Basic English (BBE)
- And so that he may make you his people today, and be your God, as he has said to you, and as he made an oath to your fathers, Abraham, Isaac, and Jacob.
- Darby Translation (DBY)
- that he may establish thee this day for a people unto himself, and [that] he may be to thee a God, as he hath said unto thee, and as he hath sworn unto thy fathers, to Abraham, to Isaac, and to Jacob.
- Webster's Bible (WBS)
- That he may establish thee to-day for a people to himself, and [that] he may be to thee a God, as he hath said to thee, and as he hath sworn to thy fathers, to Abraham, to Isaac, and to Jacob.
- Young's Literal Translation (YLT)
- in order to establish thee to-day to Him for a people, and He Himself is thy God, as He hath spoken to thee, and as He hath sworn to thy fathers, to Abraham, to Isaac, and to Jacob.
Read in context
- 11ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
- 12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
- 13ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
- 14ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
- 15ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
Cross references
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Deuteronomy 28:9 ಧರ್ಮೋಪದೇಶಕಾಂಡ 28:9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
- Jeremiah 32:38 ಯೆರೆಮೀಯ 32:38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
- Genesis 26:3–4 ಆದಿಕಾಂಡ 26:3–4ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Jeremiah 31:31–33 ಯೆರೆಮೀಯ 31:31–33ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Deuteronomy 26:18–19 ಧರ್ಮೋಪದೇಶಕಾಂಡ 26:18–19ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ. ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- Genesis 28:13–15 ಆದಿಕಾಂಡ 28:13–15ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.