Deuteronomy · chapter 29 · verse 14
Deuteronomy 29:14 in Kannada
ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
Idallade nimma sangada maatra ee odambadike yannoo ee aaneyannoo naanu maaduvadilla;
Deuteronomy 29:14 in English
- King James Version (KJV)
- Neither with you only do I make this covenant and this oath;
- World English Bible (WEB)
- Neither do I make this covenant and this oath with you only,
- American Standard Version (ASV)
- Neither with you only do I make this covenant and this oath,
- Bible in Basic English (BBE)
- And not with you only do I make this agreement and this oath;
- Darby Translation (DBY)
- Neither with you only do I make this covenant and this oath,
- Webster's Bible (WBS)
- Neither with you only do I make this covenant and this oath;
- Young's Literal Translation (YLT)
- 'And not with you alone am I making this covenant and this oath;
Read in context
- 12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
- 13ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
- 14ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
- 15ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
- 16ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
Cross references
- Hebrews 8:7–12 ಇಬ್ರಿಯರಿಗೆ 8:7–12ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Jeremiah 31:31–34 ಯೆರೆಮೀಯ 31:31–34ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.