Deuteronomy · chapter 29 · verse 7
Deuteronomy 29:7 in Kannada
ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
Neevu ee sthalakke bandaaga heshbonina arasanaada seehonanoo baashaanina arasanaada oganoo nammedurige yuddhakke baralaagi naavu avarannu hodedu
Deuteronomy 29:7 in English
- King James Version (KJV)
- And when ye came unto this place, Sihon the king of Heshbon, and Og the king of Bashan, came out against us unto battle, and we smote them:
- World English Bible (WEB)
- When you came to this place, Sihon the king of Heshbon and Og the king of Bashan came out against us to battle, and we struck them.
- American Standard Version (ASV)
- And when ye came unto this place, Sihon the king of Heshbon, and Og the king of Bashan, came out against us unto battle, and we smote them:
- Bible in Basic English (BBE)
- When you came to this place, Sihon, king of Heshbon, and Og, king of Bashan, came out to make war against us and we overcame them:
- Darby Translation (DBY)
- And ye came to this place; and Sihon the king of Heshbon and Og the king of Bashan came out against us for battle, and we smote them.
- Webster's Bible (WBS)
- And when ye came to this place, Sihon the king of Heshbon, and Og the king of Bashan, came out against us to battle, and we smote them:
- Young's Literal Translation (YLT)
- 'And ye come in unto this place, and Sihon king of Heshbon — also Og king of Bashan — doth come out to meet us, to battle, and we smite them,
Read in context
- 5ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
- 6ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.
- 7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- 8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- 9ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
Cross references
- Numbers 21:21–35 ಅರಣ್ಯಕಾಂಡ 21:21–35ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Psalm 135:10–12 ಕೀರ್ತನೆಗಳು 135:10–12ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು. ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
- Psalm 136:17–22 ಕೀರ್ತನೆಗಳು 136:17–22ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
- Numbers 32:33–42 ಅರಣ್ಯಕಾಂಡ 32:33–42ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Original words (Hebrew)
- came · H935בּוֹא bôwʼ
- place · H4725מָקוֹם mâqôwm
- Sihon · H5511סִיחוֹן Çîychôwn
- king · H4428מֶלֶךְ melek
- Heshbon · H2809חֶשְׁבּוֹן Cheshbôwn
- Og · H5747עוֹג ʻÔwg
- king · H4428מֶלֶךְ melek
- Bashan · H1316בָּשָׁן Bâshân
- out · H3318יָצָא yâtsâʼ
- against · H7125קִרְאָה qirʼâh
- battle · H4421מִלְחָמָה milchâmâh
- smote · H5221נָכָה nâkâh