Deuteronomy · chapter 3 · verse 18
Deuteronomy 3:18 in Kannada
ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
Aa kaaladalli naanu nimage aajnyaapisiddenandare--nimma devaraada kartanu nimage ee deshavannu svaastyavaagi kottiddaane; yuddhastha raagiruva neevellaru nimma sahodararaada israayel makkala munde aayudha dharisi kondu haaduhogabeku.
Deuteronomy 3:18 in English
- King James Version (KJV)
- And I commanded you at that time, saying, The LORD your God hath given you this land to possess it: ye shall pass over armed before your brethren the children of Israel, all [that are] meet for the war.
- World English Bible (WEB)
- I commanded you at that time, saying, “The LORD your God has given you this land to possess it. All of you men of valor shall pass over armed before your brothers, the children of Israel.
- American Standard Version (ASV)
- And I commanded you at that time, saying, Jehovah your God hath given you this land to possess it: ye shall pass over armed before your brethren the children of Israel, all the men of valor.
- Bible in Basic English (BBE)
- At that time I gave you orders, saying, The Lord has given you this land for your heritage: all the men of war are to go over armed before your brothers the children of Israel.
- Darby Translation (DBY)
- And I commanded you at that time, saying, Jehovah your God hath given you this land to take possession of it: ye shall pass over armed before your brethren the children of Israel, all [who are] combatants.
- Webster's Bible (WBS)
- And I commanded you at that time, saying, The LORD your God hath given you this land to possess it; ye shall pass over armed before your brethren the children of Israel, all [that are] meet for the war.
- Young's Literal Translation (YLT)
- 'And I command you, at that time, saying, Jehovah your God hath given to you this land to possess it; armed ye pass over before your brethren the sons of Israel, all the sons of might.
Read in context
- 16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- 17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- 18ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
- 19ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)
- 20ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
Cross references
- Numbers 32:20–24 ಅರಣ್ಯಕಾಂಡ 32:20–24ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.
- Joshua 4:12–13 ಯೆಹೋಶುವ 4:12–13ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು. ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
- Joshua 1:12–15 ಯೆಹೋಶುವ 1:12–15ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ -- ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು. ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
- Joshua 22:1–9 ಯೆಹೋಶುವ 22:1–9ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ-- ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ. ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ. ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ. ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು. ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು. ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು. ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು. ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
Original words (Hebrew)
- commanded · H6680צָוָה tsâvâh
- time · H6256עֵת ʻêth
- saying · H559אָמַר ʼâmar
- God · H430אֱלֹהִים ʼĕlôhîym
- given · H5414נָתַן nâthan
- land · H776אֶרֶץ ʼerets
- possess · H3423יָרַשׁ yârash
- over · H5674עָבַר ʻâbar
- armed · H2502חָלַץ châlats
- before · H6440פָּנִים pânîym
- brethren · H251אָח ʼâch
- children · H1121בֵּן bên
- Israel · H3478יִשְׂרָאֵל Yisrâʼêl
- meet · H1121בֵּן bên
- war · H2428חַיִל chayil