Deuteronomy · chapter 3 · verse 28
Deuteronomy 3:28 in Kannada
ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
Aadare yehoshu vanige aajnyaapisi avanige drudhamaadi balapadisu; avanu ee janara munde daatihogi neenu noduva deshavannu avarige svaastya vaagi honduvante maaduvanu endu helidanu.aaga naavu betpegorige eduraagiruva tagginalli vaasavaagiddevu.
Deuteronomy 3:28 in English
- King James Version (KJV)
- But charge Joshua, and encourage him, and strengthen him: for he shall go over before this people, and he shall cause them to inherit the land which thou shalt see.
- World English Bible (WEB)
- But commission Joshua, and encourage him, and strengthen him; for he shall go over before this people, and he shall cause them to inherit the land which you shall see.”
- American Standard Version (ASV)
- But charge Joshua, and encourage him, and strengthen him; for he shall go over before this people, and he shall cause them to inherit the land which thou shalt see.
- Bible in Basic English (BBE)
- But give my orders to Joshua, comforting him and making him strong; for he is to go over Jordan at the head of this people, and he will give them this land which you will see for their heritage.
- Darby Translation (DBY)
- But charge Joshua, and encourage him and strengthen him; for he shall go over before this people, and he shall put them in possession of the land which thou shalt see.
- Webster's Bible (WBS)
- But charge Joshua, and encourage him, and strengthen him: for he shall go over before this people, and he shall cause them to inherit the land which thou shalt see.
- Young's Literal Translation (YLT)
- and charge Jehoshua, and strengthen him, and harden him, for he doth pass over before this people, and he doth cause them to inherit the land which thou seest.
Read in context
- 26ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
- 27ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- 28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- 29ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
Cross references
- Deuteronomy 31:3 ಧರ್ಮೋಪದೇಶಕಾಂಡ 31:3ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
- Deuteronomy 31:23 ಧರ್ಮೋಪದೇಶಕಾಂಡ 31:23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
- Deuteronomy 1:38 ಧರ್ಮೋಪದೇಶಕಾಂಡ 1:38ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
- Deuteronomy 31:7 ಧರ್ಮೋಪದೇಶಕಾಂಡ 31:7ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
- Acts 7:45 ಅಪೊಸ್ತಲರ ಕೃತ್ಯಗಳು 7:45ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
- Numbers 27:18–23 ಅರಣ್ಯಕಾಂಡ 27:18–23ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು. ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು. ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- Joshua 3:7–17 ಯೆಹೋಶುವ 3:7–17ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು. ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು. ಆಗ ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು. ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು. ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ. ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು. ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- 1 Chronicles 28:9–10 1 ಪೂರ್ವಕಾಲವೃತ್ತಾಂತ 28:9–10ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು. ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- 1 Chronicles 22:11–16 1 ಪೂರ್ವಕಾಲವೃತ್ತಾಂತ 22:11–16ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ. ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ. ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು. ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- 2 Timothy 2:1–3 2 ತಿಮೊಥೆಯನಿಗೆ 2:1–3ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು. ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- 2 Timothy 4:1–6 2 ತಿಮೊಥೆಯನಿಗೆ 4:1–6ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು. ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು. ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು. ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.