Deuteronomy · chapter 30 · verse 1
Deuteronomy 30:1 in Kannada
ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
Idallade naanu ninna munde itta ee ellaa aasheervaadavoo shaapavoo ninage sambhavisida mele naanu eehottu ninage aajnyaapisuvadellaadaralli ninna devaraada kartanu ninnannu tallibitta ellaa janaangagala madhyadalli neenu nenapumaadi
Deuteronomy 30:1 in English
- King James Version (KJV)
- And it shall come to pass, when all these things are come upon thee, the blessing and the curse, which I have set before thee, and thou shalt call [them] to mind among all the nations, whither the LORD thy God hath driven thee,
- World English Bible (WEB)
- It shall happen, when all these things have come on you, the blessing and the curse, which I have set before you, and you shall call them to mind among all the nations where the LORD your God has driven you,
- American Standard Version (ASV)
- And it shall come to pass, when all these things are come upon thee, the blessing and the curse, which I have set before thee, and thou shalt call them to mind among all the nations, whither Jehovah thy God hath driven thee,
- Bible in Basic English (BBE)
- Now when all these things have come on you, the blessing and the curse which I have put before you, if the thought of them comes back to your minds, when you are living among the nations where the Lord your God has sent you,
- Darby Translation (DBY)
- And it shall come to pass, when all these things are come upon thee, the blessing and the curse, which I have set before thee, and thou shalt take them to heart among all the nations whither Jehovah thy God hath driven thee,
- Webster's Bible (WBS)
- And it shall come to pass, when all these things have come upon thee, the blessing and the curse, which I have set before thee, and thou shalt call [them] to mind among all the nations whither the LORD thy God hath driven thee,
- Young's Literal Translation (YLT)
- 'And it hath been, when all these things come upon thee, the blessing and the reviling, which I have set before thee, and thou hast brought [them] back unto thy heart, among all the nations whither Jehovah thy God hath driven thee away,
Read in context
- 1ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
- 2ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
- 3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
Cross references
- 1 Kings 8:47–48 1 ಅರಸುಗಳು 8:47–48ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- Deuteronomy 30:15 ಧರ್ಮೋಪದೇಶಕಾಂಡ 30:15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
- Deuteronomy 4:29–30 ಧರ್ಮೋಪದೇಶಕಾಂಡ 4:29–30ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- Deuteronomy 30:19 ಧರ್ಮೋಪದೇಶಕಾಂಡ 30:19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Deuteronomy 29:28 ಧರ್ಮೋಪದೇಶಕಾಂಡ 29:28ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Deuteronomy 11:26–28 ಧರ್ಮೋಪದೇಶಕಾಂಡ 11:26–28ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು. ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Luke 15:17 ಲೂಕನು 15:17ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
- Ezekiel 18:28 ಯೆಹೆಜ್ಕೇಲನು 18:28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- Deuteronomy 29:18–23 ಧರ್ಮೋಪದೇಶಕಾಂಡ 29:18–23ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Isaiah 46:8 ಯೆಶಾಯ 46:8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
- Deuteronomy 27:1–26 ಧರ್ಮೋಪದೇಶಕಾಂಡ 27:1–26ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು. ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು. ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು. ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು. ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು. ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು. ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ. ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು. ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ-- ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್. ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು. ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ-- ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.