Deuteronomy · chapter 30 · verse 14
Deuteronomy 30:14 in Kannada
ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
Ee vaakyavu ninage bahala saviాpavaagide; adannu kaikolluva haage ninna baayalliyoo ninna hrudayadalliyoo ade.
Deuteronomy 30:14 in English
- King James Version (KJV)
- But the word [is] very nigh unto thee, in thy mouth, and in thy heart, that thou mayest do it.
- World English Bible (WEB)
- But the word is very near to you, in your mouth and in your heart, that you may do it.
- American Standard Version (ASV)
- But the word is very nigh unto thee, in thy mouth, and in thy heart, that thou mayest do it.
- Bible in Basic English (BBE)
- But the word is very near you, in your mouth and in your heart, so that you may do it.
- Darby Translation (DBY)
- For the word is very near to thee, in thy mouth and in thy heart, that thou mayest do it.
- Webster's Bible (WBS)
- But the word [is] very nigh to thee, in thy mouth, and in thy heart, that thou mayest do it.
- Young's Literal Translation (YLT)
- For very near unto thee is the word, in thy mouth, and in thy heart — to do it.
Read in context
- 12ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
- 13ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
- 14ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
- 15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
- 16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
Cross references
- Romans 10:8–10 ರೋಮಾಪುರದವರಿಗೆ 10:8–10ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Jeremiah 12:2 ಯೆರೆಮೀಯ 12:2ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- John 5:46 ಯೋಹಾನನು 5:46ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
- Matthew 7:21 ಮತ್ತಾಯನು 7:21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
- Ezekiel 2:5 ಯೆಹೆಜ್ಕೇಲನು 2:5ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Hebrews 2:1–3 ಇಬ್ರಿಯರಿಗೆ 2:1–3ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು. ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Ezekiel 33:33 ಯೆಹೆಜ್ಕೇಲನು 33:33ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Luke 10:11–12 ಲೂಕನು 10:11–12ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ. ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
- Acts 28:23–28 ಅಪೊಸ್ತಲರ ಕೃತ್ಯಗಳು 28:23–28ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು. ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು. ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- Acts 13:38–41 ಅಪೊಸ್ತಲರ ಕೃತ್ಯಗಳು 13:38–41ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ. ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.