Deuteronomy · chapter 31 · verse 16
Deuteronomy 31:16 in Kannada
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
Aaga kartanu moshege--neenu ninna pitrugala sangada malaguvi; ee janaru eddu taavu praveshisuva deshada anyadevarugalannu anusarisi jaaratvamaadi nannannu bittu naanu avara sangada maadikonda odambadikeyannu viాruvaru.
Deuteronomy 31:16 in English
- King James Version (KJV)
- And the LORD said unto Moses, Behold, thou shalt sleep with thy fathers; and this people will rise up, and go a whoring after the gods of the strangers of the land, whither they go [to be] among them, and will forsake me, and break my covenant which I have made with them.
- World English Bible (WEB)
- The LORD said to Moses, “Behold, you shall sleep with your fathers. This people will rise up and play the prostitute after the strange gods of the land where they go to be among them, and will forsake me and break my covenant which I have made with them.
- American Standard Version (ASV)
- And Jehovah said unto Moses, Behold, thou shalt sleep with thy fathers; and this people will rise up, and play the harlot after the strange gods of the land, whither they go to be among them, and will forsake me, and break my covenant which I have made with them.
- Bible in Basic English (BBE)
- And the Lord said to Moses, Now you are going to rest with your fathers; and this people will be false to me, uniting themselves to the strange gods of the land where they are going; they will be turned away from me and will not keep the agreement I have made with them.
- Darby Translation (DBY)
- And Jehovah said to Moses, Behold, thou shalt sleep with thy fathers; and this people will rise up, and go a whoring after the strange gods of the land into which they enter, and will forsake me, and break my covenant which I have made with them.
- Webster's Bible (WBS)
- And the LORD said to Moses, Behold, thou shalt sleep with thy fathers, and this people will rise up, and commit idolatry with the gods of the strangers of the land, whither they go [to be] among them, and will forsake me, and break my covenant which I have made with them.
- Young's Literal Translation (YLT)
- And Jehovah saith unto Moses, 'Lo, thou art lying down with thy fathers, and this people hath risen, and gone a-whoring after the gods of the stranger of the land into the midst of which it hath entered, and forsaken Me, and broken My covenant which I made with it;
Read in context
- 14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- 15ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು.
- 16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- 17ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
- 18ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
Cross references
- Judges 10:6 ನ್ಯಾಯಸ್ಥಾಪಕರು 10:6ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
- Judges 10:13 ನ್ಯಾಯಸ್ಥಾಪಕರು 10:13ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
- Judges 2:12 ನ್ಯಾಯಸ್ಥಾಪಕರು 2:12ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
- Exodus 34:15 ವಿಮೋಚನಕಾಂಡ 34:15ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
- Ezekiel 16:15 ಯೆಹೆಜ್ಕೇಲನು 16:15ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Hosea 2:2–5 ಹೋಶೇಯ 2:2–5ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ. ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ. ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ, ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Jeremiah 2:11–13 ಯೆರೆಮೀಯ 2:11–13ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Ezekiel 23:5–21 ಯೆಹೆಜ್ಕೇಲನು 23:5–21ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು. ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
- Ezekiel 16:25–36 ಯೆಹೆಜ್ಕೇಲನು 16:25–36ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ; ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ! ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ. ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ. ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
- Isaiah 57:2–8 ಯೆಶಾಯ 57:2–8ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ. ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ. ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ? ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ? ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ? ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ. ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- sleep · H7901שָׁכַב shâkab
- fathers · H1אָב ʼâb
- people · H5971עַם ʻam
- up · H6965קוּם qûwm
- whoring · H2181זָנָה zânâh
- after · H310אַחַר ʼachar
- gods · H430אֱלֹהִים ʼĕlôhîym
- strangers · H5236נֵכָר nêkâr
- land · H776אֶרֶץ ʼerets
- go · H935בּוֹא bôwʼ
- among · H7130קֶרֶב qereb
- forsake · H5800עָזַב ʻâzab
- break · H6565פָּרַר pârar
- covenant · H1285בְּרִית bᵉrîyth
- made · H3772כָּרַת kârath