Deuteronomy · chapter 31 · verse 4
Deuteronomy 31:4 in Kannada
ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
Kartanu amoriyara arasanaada seehonanigoo oganigoo aatanu naashamaadida avara deshakkoo maadidante aa janaangagalige maaduvanu.
Deuteronomy 31:4 in English
- King James Version (KJV)
- And the LORD shall do unto them as he did to Sihon and to Og, kings of the Amorites, and unto the land of them, whom he destroyed.
- World English Bible (WEB)
- The LORD will do to them as he did to Sihon and to Og, the kings of the Amorites, and to their land, when he destroyed them.
- American Standard Version (ASV)
- And Jehovah will do unto them as he did to Sihon and to Og, the kings of the Amorites, and unto their land; whom he destroyed.
- Bible in Basic English (BBE)
- The Lord will do to them as he did to Sihon and to Og, the kings of the Amorites, and to their land, whom he put to destruction.
- Darby Translation (DBY)
- And Jehovah will do to them as he did to Sihon and to Og, the kings of the Amorites, and to their land; whom he destroyed.
- Webster's Bible (WBS)
- And the LORD shall do to them as he did to Sihon, and to Og, kings of the Amorites, and to the land of them, whom he destroyed.
- Young's Literal Translation (YLT)
- and Jehovah hath done to them as he hath done to Sihon and to Og, kings of the Amorite, and to their land, whom He destroyed.
Read in context
- 2ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
- 3ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
- 4ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
- 5ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
- 6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
Cross references
- Deuteronomy 3:21 ಧರ್ಮೋಪದೇಶಕಾಂಡ 3:21ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
- Numbers 21:24–35 ಅರಣ್ಯಕಾಂಡ 21:24–35ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Deuteronomy 2:33 ಧರ್ಮೋಪದೇಶಕಾಂಡ 2:33ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
- Deuteronomy 3:3–11 ಧರ್ಮೋಪದೇಶಕಾಂಡ 3:3–11ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು. ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು. ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು. ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.) ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Exodus 23:28–31 ವಿಮೋಚನಕಾಂಡ 23:28–31ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.