Deuteronomy · chapter 31 · verse 5
Deuteronomy 31:5 in Kannada
ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
Naanu nimage aajnyaapisida samasta aajnyeya prakaara neevu avarige maaduvahaage kartanu avarannu nimma munde oppisibiduvanu.
Deuteronomy 31:5 in English
- King James Version (KJV)
- And the LORD shall give them up before your face, that ye may do unto them according unto all the commandments which I have commanded you.
- World English Bible (WEB)
- The LORD will deliver them up before you, and you shall do to them according to all the commandment which I have commanded you.
- American Standard Version (ASV)
- And Jehovah will deliver them up before you, and ye shall do unto them according unto all the commandment which I have commanded you.
- Bible in Basic English (BBE)
- The Lord will give them up into your hands, and you are to do to them as I have given you orders.
- Darby Translation (DBY)
- And when Jehovah giveth them up before you, ye shall do to them according to all the commandment which I have commanded you.
- Webster's Bible (WBS)
- And the LORD shall give them up before your face, that ye may do to them according to all the commandments which I have commanded you.
- Young's Literal Translation (YLT)
- And Jehovah hath given them before your face, and ye have done to them according to all the command which I have commanded you;
Read in context
- 3ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
- 4ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
- 5ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
- 6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- 7ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
Cross references
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Deuteronomy 20:16–17 ಧರ್ಮೋಪದೇಶಕಾಂಡ 20:16–17ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
- Exodus 23:32–33 ವಿಮೋಚನಕಾಂಡ 23:32–33ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು. ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Numbers 33:52–56 ಅರಣ್ಯಕಾಂಡ 33:52–56ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು. ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು. ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- Deuteronomy 7:18 ಧರ್ಮೋಪದೇಶಕಾಂಡ 7:18ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
- Exodus 34:12–16 ವಿಮೋಚನಕಾಂಡ 34:12–16ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು. ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು. ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- Deuteronomy 7:23–25 ಧರ್ಮೋಪದೇಶಕಾಂಡ 7:23–25ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು. ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು. ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.